ಉಡುಪಿ:ಏ.4ರಿಂದ 14ರವರೆಗೆ ಉಡುಪಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದ್ದು, ನೋಂದಣಿಗೆ ಅಭ್ಯರ್ಥಿಗಳಿಗೆ ಆಧಾರ್ ಕಾರ್ಡ್ ಡೇಟಾ ಹೊಂದಾಣಿಕೆ ಆಗದಿರá-ವುದು ಸಮಸ್ಯೆಯೊಡ್ಡುತ್ತಿದೆ.
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಗದಗ, ಹಾವೇರಿ ಜಿಲ್ಲೆಯ ಅಭ್ಯರ್ಥಿಗಳು ರ್ಯಾಲಿಯಲ್ಲಿ ಸೇನೆ ಸೇರಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಆನ್​ಲೈನ್ ಮೂಲಕ ಮಾ.20ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, 15 ಸಾವಿರಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಬಹುತೇಕರು
ಆಧಾರ್ ಕಾರ್ಡ್ ಡೇಟಾ ಹೊಂದಿಕೆಯಾಗದೆ ನೋಂದಣಿಯಿಂದ ವಂಚಿತರಾಗುವ ಆತಂಕದಲ್ಲಿದ್ದಾರೆ. ವೆಬ್​ಸೈಟ್​ನಲ್ಲಿ ನೋಂದಣಿ ಮಾಡಿಕೊಳ್ಳುವಾಗ ಆಧಾರ್ ನಂಬರ್ ನಮೂದಿಸಿ, ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿರುವ ಸ್ವವಿವರ ದಾಖಲಿಸ ಬೇಕು. ಎಲ್ಲ ವಿವರ ಸೇರಿಸಿ ಸಲ್ಲಿಕೆ ಮಾಡುವಾಗ ‘ಆಧಾರ್ ಕಾರ್ಡ್ ಡೇಟಾ ಮ್ಯಾಚ್ ಆಗುತ್ತಿಲ್ಲ’ ಎಂಬ ಬರಹ ಕಂಪ್ಯೂಟರ್ ಪರದೆ ಮೇಲೆ ಕಾಣಿಸಿಕೊಳ್ಳುತ್ತದೆ.
ಇದರಿಂದ ನೋಂದಣಿ ಪ್ರÅಯೆ ಪೂರ್ಣಗೊಳ್ಳುತ್ತಿಲ್ಲ. ಕೆಲವರು ಎಸ್ಸೆಸ್ಸೆಲ್ಸಿ ಅಂಕಪಟ್ಟಿ ವಿವರ ಗಮನಿಸದೆ ಇನಿಶಿಯಲ್, ಸರ್​ನೇಮ್ ವ್ಯತ್ಯಾಸ ಮಾಡಿ ಆಧಾರ್ ಮಾಡಿಸಿದಲ್ಲಿ ಈ ರೀತಿ ಸಮಸ್ಯೆಗೆ ಕಾರಣವಾಗುತ್ತದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:fourteen + 20 =
Remember me
