| ಎನ್.ಎಲ್.ಶಿವಮಾದು ಬೆಂಗಳೂರುಮುಂಬರುವ 2024ರ ಮಾರ್ಚ್/ಏಪ್ರಿಲ್​ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ನಿರ್ಧರಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಕೊಕ್ ನೀಡಿ, ಹೋಬಳಿ, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದೆ.
ಹಿಂದಿನ ವರ್ಷಗಳಲ್ಲಿನ ಸಾಮೂಹಿಕ ನಕಲು ಪ್ರಕರಣಗಳಿಗೆ ಪಾಲಕ ವರ್ಗದಿಂದ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಇಲಾಖೆಗೆ ಮುಜುಗರವನ್ನುಂಟು ಮಾಡಿದೆ. ಆದ್ದರಿಂದ ಈ ಬಾರಿ ಎಲ್ಲ ಹಂತದ ಅಧಿಕಾರಿಗಳು ಮತ್ತು ಶಿಕ್ಷಕರು ನಕಲು ತಡೆಗಟ್ಟಲು ಶ್ರಮಿಸಬೇಕು ಎಂದು ಮಂಡಳಿ ತಿಳಿಸಿದೆ.
ಕಳೆದ ವರ್ಷ 724-ಜಿಲ್ಲಾ, 755-ತಾಲೂಕು, 604-ಹೋಬಳಿ ಮತ್ತು 1,222-ಗ್ರಾಮೀಣ ಪ್ರದೇಶದ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟಾರೆ 3,305 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆ ನಡೆಸಲಾಗಿತ್ತು. ಆದರೆ ಈ ಬಾರಿ ಕೇಂದ್ರಗಳ ಸಂಖ್ಯೆ ಕಡಿಮೆ ಮಾಡಬೇಕು.
ಇದರಿಂದ ಅಧಿಕಾರಿಗಳು ಸೂಕ್ತ ನಿಗಾ ವಹಿಸಲು ಸಾಧ್ಯವಾಗಲಿದೆ ಎಂದು ತಿಳಿಸಿರುವ ಮಂಡಳಿ, ಸಾಧ್ಯವಾದಷ್ಟು ಕ್ಲಸ್ಟರ್ ಕೇಂದ್ರಗಳನ್ನು ಕಡಿಮೆ ಮಾಡಬೇಕು. ಅನಿವಾರ್ಯವಾದಲ್ಲಿ ಮಾತ್ರ ಅಂದರೆ, ಬೆಟ್ಟಗುಡ್ಡ, ಅಣೆಕಟ್ಟು/ಅರಣ್ಯ/ನದಿ ತಪ್ಪಲಿನ ಪ್ರದೇಶ ಮತ್ತು ಇನ್ನಿತರ ನೈಸರ್ಗಿಕ ಕಾರಣಗಳಿದ್ದಲ್ಲಿ ಪರೀಕ್ಷಾ ಕೇಂದ್ರದ ರಚನೆಯ ನಿಯಮಗಳನ್ನು ಸಡಿಲಗೊಳಿಸುವಂತೆ ಸೂಚನೆ ನೀಡಿದೆ.
10 ಕಿಮೀ ವ್ಯಾಪ್ತಿಯೊಳಗಿನ 8-10 ಶಾಲೆಗಳನ್ನು ಸೇರಿಸಿ ಕ್ಲಸ್ಟರ್ ಹಂತದಲ್ಲಿ ಹೆಚ್ಚಿನ ಸಾಮರ್ಥ್ಯವಿರುವ ಕೇಂದ್ರವನ್ನು ಪರೀಕ್ಷಾ ಕೇಂದ್ರವನ್ನಾಗಿ ರೂಪಿಸಬೇಕು. ಹಾಗೆಯೇ ನೆಲಮಹಡಿಯಲ್ಲಿ ಆಸನ ವ್ಯವಸ್ಥೆ ಮಾಡದೆ ಮೊದಲನೇ ಮಹಡಿಯಲ್ಲಿ ಮಾಡಬೇಕು ಎಂದು ತಿಳಿಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ರಚನೆ ಮತ್ತು ಪರೀಕ್ಷೆಯಲ್ಲಿ ನಕಲು ತಡೆಗಟ್ಟಲು ಶಿಕ್ಷಕರು, ಬಿಇಒ ಮತ್ತು ಡಿಡಿಪಿಐಗಳು ಎಚ್ಚರಿಕೆ ವಹಿಸಬೇಕು. ಎಲ್ಲ ಸೌಲಭ್ಯವಿರುವ ಕೇಂದ್ರಗಳಿಗೆ ಮಾತ್ರ ಆದ್ಯತೆ ನೀಡಬೇಕು.
| ಆರ್.ರಾಮಚಂದ್ರನ್, ಅಧ್ಯಕ್ಷ, ಕೆಎಸ್​ಇಎಬಿ
ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ:ಜಿಲ್ಲಾ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆಯನ್ನು ಆಯೋಜಿಸಿ ಪರೀಕ್ಷೆಯಲ್ಲಿ ನಕಲು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕ್ರಿಯಾಯೋಜನೆ ಸಿದ್ಧಪಡಿಸಬೇಕು. ಜಿಲ್ಲಾ ಹಂತದಲ್ಲಿ ಡಿಡಿಪಿಐ ಮತ್ತು ತಾಲೂಕು ಹಂತದಲ್ಲಿ ಬಿಇಒ ತೆಗೆದುಕೊಂಡ ಕ್ರಮಗಳನ್ನು ಇಲಾಖೆ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮಂಡಿಸುವಂತೆ ಮಂಡಳಿ ತಿಳಿಸಿದೆ.
ಕಳವಾದ ಮೊಬೈಲ್‌ಫೋನ್ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ!

ಮದುವೆಯಾಗುವ ಕನಸು ಚಿಗುರಿಸಿದ ಟೊಮ್ಯಾಟೋ; ಹುಡುಗಿ ಹುಡುಕಲು ಮುಂದಾದ ಕೃಷಿಕ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 + nineteen =
Remember me
