ಧಾರವಾಡ:ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿ ವಿಶ್ರಾಂತ ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ (65) ಅವರು ಭಾನುವಾರದಂದು ನಿಧನರಾಗಿದ್ದಾರೆ. ಕರೊನಾದಿಂದ ಗುಣಮುಖವಾದ ನಂತರವೂ ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಹೇಶ್ವರಯ್ಯ ಅವರು ಮೂಲ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದ ನಿವಾಸಿ. ಕರ್ನಾಟಕ ವಿವಿ ಕನ್ನಡ ಅಧ್ಯಯನ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಕಲಬುರಗಿ ಕೇಂದ್ರ ವಿವಿ ಕುಲಪತಿ ಹುದ್ದೆಯಿಂದ ಇತ್ತೀಚೆಗೆ ನಿವೃತ್ತಿ ಪಡೆದ ನಂತರ ಧಾರವಾಡದಲ್ಲೇ ವಾಸ ಮುಂದುವರಿಸಿದ್ದರು. ಅವರಿಗೆ ಇತ್ತೀಚೆಗೆ ಕರೊನಾ ಸೋಂಕು ತಗುಲಿದ್ದು, ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಬೇರೆ ಸಮಸ್ಯೆಗಳು ಇದ್ದಿದ್ದರಿಂದಾಗಿ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಹೇಶ್ವರಯ್ಯ ಅವರ ಪತ್ನಿ ಪ್ರೊ.ರಾಜೇಶ್ವರಿ ಅವರು ಖ್ಯಾತ ಭಾಷಾ ಶಾಸ್ತ್ರಜ್ಞೆಯಾಗಿದ್ದಾರೆ. ದಂಪತಿಗೆ ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ವಿವಿ ರುದ್ರಭೂಮಿಯಲ್ಲಿ ನಡೆಸಲಾಗುವುದು ಎಂದು ತಿಳಿಸಲಾಗಿದೆ.
ಮದುವೆ ಊಟದಲ್ಲಿ ಮೀನಿನ ತಲೆಗಾಗಿ ಹೊಡೆದಾಡಿದ ಸಂಬಂಧಿಗಳು! 11 ಮಂದಿ ಆಸ್ಪತ್ರೆಗೆ ದಾಖಲು

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಗಂಡನನ್ನು ಕೊಂದು ಆತನ ಮರ್ಮಾಂಗ ಫ್ರೈ ಮಾಡಿದ ಹೆಂಡತಿ! ಮಹಿಳೆಯ ಹುಚ್ಚಾಟ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × five =
Remember me
