ಬೆಂಗಳೂರು:ಅತಿವೃಷ್ಟಿಯಿಂದ ಹಾಳಾದ ರಸ್ತೆಗಳ ಪ್ರಗತಿ ತೃಪ್ತಿಕರವಾಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ವಿಕಾಸಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಸಿಇಒಗಳೊಂದಿಗೆ ನಡೆಸಿದ ವಿಡಿಯೋ ಸಭೆಯಲ್ಲಿ ಮಾತನಾಡಿದರು.ಪ್ರಗತಿಪಥ, ಕಲ್ಯಾಣ ಪಥ ಈ ಎರಡೂ ಯೋಜನೆಗಳಡಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಎಂಜನಿಯರುಗಳು ಯೋಜನಾ ವರದಿಗಳನ್ನು ಸಿದ್ಧಪಡಿಸಿ ಈ ತಿಂಗಳ 17ರೊಳಗೆ ಮಂಜೂರಾತಿ ಕೋರಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದಂತೆ ರಸ್ತೆಗಳನ್ನು ಸುಸ್ಥಿರ ರೀತಿಯಲ್ಲಿ ನಿರ್ಮಾಣ ಮಾಡಲು ಸಚಿವರು ಕಟ್ಟುನಿಟ್ಟಿನ ಆದೇಶ ನೀಡಿದರು.ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಗತಿಪಥ ಹಾಗೂ ಕಲ್ಯಾಣಪಥ ಕಾರ್ಯಕ್ರಮಗಳು ಕೇವಲ ರಸ್ತೆ ನಿರ್ಮಾಣ ಮಾತ್ರವಲ್ಲ, ರಾಜ್ಯವನ್ನು ಪ್ರಗತಿಯತ್ತ ತೆಗೆದುಕೊಂಡು ಹೋಗುವ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಯೋಜನೆಗಳಾಗಿವೆ ಎಂದು ಹೇಳಿದರು.
ಪ್ರಗತಿಪಥ ಯೋಜನೆಯಡಿ ರಾಜ್ಯದ 7110 ಕಿ.ಮೀ ಉದ್ದದ ರಸ್ತೆಗಳನ್ನು 5190 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಹಾಗೆಯೇ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಲ್ಲಿ 1150 ಕಿ.ಮೀ ಉದ್ದದ ರಸ್ತೆಗಳನ್ನು 1000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಶೀಘ್ರ ಪ್ರಕ್ರಿಯೆಗಳನ್ನು ಮುಗಿಸಿ, ಅಕ್ಟೋಬರ್ 2 ರಂದು ಕಾಮಗಾರಿಗಳಿಗೆ ಚಾಲನೆ ನೀಡಬೇಕೆಂದು ತಿಳಿಸಿದರು.
ಅತಿವೃಷ್ಟಿಯಿಂದ ಹಾಳಾಗಿರುವ ಗ್ರಾಮೀಣ ರಸ್ತೆಗಳನ್ನು ದುರಸ್ತಿ ಮಾಡಲು ಸಾಕಷ್ಟು ಅನುದಾನ ಲಭ್ಯವಿದ್ದಾಗ್ಯೂ ಪ್ರಗತಿ ತೃಪ್ತಿಕರವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರಲ್ಲದೆ, ಶೀಘ್ರದಲ್ಲಿ ಈ ಕಾಮಗಾರಿಗಳನ್ನು ಮುಗಿಸದಿದ್ದಲ್ಲಿ ಎಇಇಗಳನ್ನು ಹೊಣೆಗಾರರನ್ನಾಗಿ ಮಾಡಿ ಅಮಾನತುಪಡಿಸಲು ಹಾಗೂ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸಿಇಒಗಳಿಗೆ ಸೂಚಿಸಿದರು
ರಸ್ತೆ ನಿರ್ಮಾಣ ಕಾಮಗಾರಿ ನಡೆಯುವಾಗ ಸ್ಥಳ ಸಮೀಕ್ಷೆ ನಡೆಸದ ಎಂಜನಿಯರ್‌ಗಳು ಹಣ ಪಾವತಿ ಮಾಡುವಾಗ ಪರಿಶೀಲನೆ ನಡೆಸುವ ಪದ್ಧತಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ರಸ್ತೆ ನಿರ್ಮಾಣದ ಕಾಮಗಾರಿಗಳು ನಡೆಯುವಾಗ ಸ್ಥಳದಲ್ಲಿದ್ದು ಗುಣಮಟ್ಟದಿಂದ ಕೂಡಿದ ರಸ್ತೆಗಳು ನಿರ್ಮಾಣವಾಗುವಂತೆ ನಿಗಾ ವಹಿಸಬೇಕೆಂದು ಆದೇಶಿಸಿದರು.
ಘನತ್ಯಾಜ್ಯ ವಿಲೇವಾರಿ ಸಂಬಂಧದಲ್ಲಿ ಗ್ರಾಮೀಣ ಭಾಗಗಳಲ್ಲಿ ಮಹಿಳಾ ಚಾಲಕರನ್ನು ಒಳಗೊಂಡ ವಾಹನಗಳನ್ನು ಸಿದ್ಧಪಡಿಸಲಾಗಿದೆ. ಈ ಚಾಲಕರಿಗೆ ವೇತನ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡುವಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಪ್ರಿಯಾಂಕ್ ಖರ್ಗೆ ಸಿಇಒಗಳಿಗೆ ತಿಳಿಸಿದರು.
ಅಭಿವೃದ್ಧಿ ಆಯುಕ್ತರೂ ಆದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್, ಪಂಚಾಯತ್ ರಾಜ್ ಆಯುಕ್ತೆ ಡಾ.ಅರುಂದತಿ ಚಂದ್ರಶೇಖರ್, ನರೇಗ ಆಯುಕ್ತ ಪವನ್ ಕುಮಾರ್ ಮಾಲಪಾಟಿ, ಗ್ರಾಮೀಣ ನೀರು ಸರಬರಾಜು ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್, ಇ-ಆಡಳಿತ ನಿರ್ದೇಶಕಿ ಡಾ.ಕೆ.ನಂದಿನಿದೇವಿ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 1 =
Remember me
