ಬೆಂಗಳೂರು:ಹದಿನೈದು ದಿನಗಳ ಕಾಲ ರಾಜಧಾನಿ ಬೆಂಗಳೂರಿನ ಪ್ರದೇಶವೊಂದರಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪುಗೂಡುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ-ಸಭೆ ಕೂಡ ನಡೆಸುವಂತಿಲ್ಲ ಎಂಬುದಾಗಿ ಬೆಂಗಳೂರು ಪೊಲೀಸ್​ ಕಮಿಷನರ್ ಸಿ.ಎಚ್​.ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಅಂದರೆ ವಿಧಾನಸೌಧದಲ್ಲಿ ಫೆ. 10ರಿಂದ ಫೆ.24ರ ವರೆಗೆ ಜಂಟಿ ಹಾಗೂ ಆಯವ್ಯಯ ಅಧಿವೇಶನಗಳು ನಡೆಯಲಿರುವುದರಿಂದ ಅವರು ಈ ಆದೇಶ ಹೊರಡಿಸಿದ್ದಾರೆ. ಅರ್ಥಾತ್, ವಿಧಾನಸೌಧದ ಸುತ್ತಮುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಫೆ. 10ರಿಂದ 24ರ ವರೆಗೆ ಅಧಿವೇಶನ ನಡೆಯುವ ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಜಂಟಿ ಮತ್ತು ಆಯವ್ಯಯ ಅಧಿವೇಶನಗಳು ನಡೆಯುವ ಅವಧಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುವ ಮಾಹಿತಿ ಇರುವುದರಿಂದ ಈ ಆದೇಶ ಹೊರಡಿಸಿದ್ದಾಗಿ ಅವರು ತಿಳಿಸಿದ್ದಾರೆ.ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಫ್ರೀಡಂಪಾರ್ಕ್‌ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಈ ಕೆಳಕಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ವಿಧಿಸಲಾಗಿದೆ.
1. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು.
2. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು,
3. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆ ಉಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು,
4. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು,
5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.
ಸಿನಿಮಾ ಹೀರೋಯಿನ್​ಗೆ ಹೋಲಿಸಿದ್ದಕ್ಕೆ ಪತಿಗೆ ಊಟ ಹಾಕಲ್ಲ ಎಂದ ಪತ್ನಿ!

ರೇಸ್‌ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್​ ಅಂಬರೀಷ್ ಹೆಸರು; ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:3 × 4 =
Remember me
