ಬೆಂಗಳೂರು:ಸುಸ್ಥಿರ ಕೃಷಿಯನ್ನು ಉತ್ತೇಜನ ಮತ್ತು ಸಮರ್ಥ ನೀರಿನ ನಿರ್ವಹಣೆ ಖಾತರಿಪಡಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ನಬಾರ್ಡ್)ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಸೂಕ್ಷ್ಮ ನೀರಾವರಿ ನಿಧಿಯ ಅಡಿಯಲ್ಲಿ ಹಣಕಾಸಿನ ನೆರವು ಪಡೆಯಲು ಈ ಒಪ್ಪಂದ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ. ಆರ್. ವಿಶಾಲ್ ಮತ್ತು ನಬಾರ್ಡ್ ಕರ್ನಾಟಕ ಪ್ರಾದೇಶಿಕ ಕಚೇರಿ ಮುಖ್ಯ ಜನರಲ್ ಮ್ಯಾನೇಜರ್ ಟಿ.ರಮೇಶ್ ಒಪ್ಪಂದಕ್ಕೆ ಸಹಿ ಹಾಕಿದರು.
ಸುಸ್ಥಿರ ಕೃಷಿಯತ್ತ ಮತ್ತು ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ಈ ಒಪ್ಪಂದ ಬೆಂಬಲಿಸುತ್ತದೆ.ಕೃಷಿ ಸುಸ್ಥಿರತೆಗೆ ನೀರಿನ ಸಂರಕ್ಷಣೆ ಮತ್ತು ಸಮರ್ಥ ನೀರಾವರಿ ಪದ್ಧತಿಗಳು ಅತ್ಯುನ್ನತವಾಗಿವೆ. ನಬಾರ್ಡ್ ಬೆಂಬಲದೊಂದಿಗೆ ನಮ್ಮ ರೈತರಿಗೆ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಜ್ಯದಲ್ಲಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನಾವು ಮಹತ್ವದ ಹೆಜ್ಜೆ ಇಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
2.63 ಲಕ್ಷ ರೈತರ 2.72 ಲಕ್ಷ ಹೆ. ಪ್ರದೇಶವನ್ನು ಈ ಯೋಜನೆಯಡಿ 290 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಸಬ್ಸಿಡಿಗಾಗಿ ಸಾಲವನ್ನು ಪಡೆಯಲು ಅಂದಾಜಿಸಲಾಗಿದೆ. ಇದಲ್ಲದೆ ಈ ಯೋಜನೆಯಡಿ ಕೇಂದ್ರ ಸರ್ಕಾರದಿಂದ 360 ಕೋಟಿ ರೂ. ಮತ್ತು ರಾಜ್ಯ ಸರ್ಕಾರದಿಂದ 240 ಕೋಟಿ ರೂ. ನಿಧಿ ದೊರೆಯುತ್ತದೆ. ಇದರಿಂದ ಒಟ್ಟು 990 ಕೋಟಿ ರೂ. ಲಾಭವನ್ನು ನಮ್ಮ ರೈತರು ಪಡೆಯುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:thirteen − eleven =
Remember me
