ಬೆಂಗಳೂರು:ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತ ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯನ) (ಕರ್ನಾಟಕ ತಿದ್ದುಪಡಿ) ವಿಧೇಯಕ, ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ ಹಾಗೂ 2024ನೇ ಸಾಲಿನ ಕರ್ನಾಟಕ ಸ್ಟಾ್ಯಂಪು (ತಿದ್ದುಪಡಿ) ವಿಧೇಯಕ ಒಳಗೊಂಡಂತೆ 13 ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರ ನೀಡಲಾಯಿತು.
ಉಪನೋಂದಣಿ ಕಚೇರಿಗೆ ಅನಗತ್ಯ ಅಲೆದಾಟಕ್ಕೆ ಬ್ರೇಕ್ ಹಾಕುವ ಹಾಗೂ ಮನೆಯಿಂದಲೇ ರಿಜಿಸ್ಟ್ರೇಷನ್ ಮಾಡುವ ಉದ್ದೇಶದಿಂದ ನೋಂದಣಿ ತಿದ್ದುಪಡಿ ವಿಧೇಯಕ-2024 ಮಂಡಿಸಿ ಸಚಿವ ಕೃಷ್ಣ ಬೈರೇಗೌಡ ಅಂಗೀಕಾರ ಪಡೆದುಕೊಂಡರು. ಮುಖ್ಯವಾಗಿ ಇ-ಆಸ್ತಿ ಮೂಲಕ ಖಾತೆ ಆಗಿದ್ದರೆ ಮಾತ್ರ ಇನ್ನು ಮುಂದೆ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೌಸಿಂಗ್ ಬೋರ್ಡ್, ಕಾವೇರಿ ಡೇಟಾಬೇಸ್​ನಿಂದ ಅಸಲಿ ಖಾತಾ ಪರಿಶೀಲನೆ ನಡೆಸಿದ ನಂತರವೇ ನೋಂದಣಿ ಮುಂದುವರಿಯಲಿದೆ.
ಆ ಮೂಲಕ ಇ-ಖಾತಾವನ್ನು ನೀಡಲಾಗುವುದು. ಇಂತಹ ಕ್ರಮಗಳಿಂದ ಅಕ್ರಮಗಳಿಗೂ ತಡೆಯೊಡ್ಡಿದಂತಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.
ನೋಂದಣಿ ಪ್ರಕ್ರಿಯೆಯಲ್ಲಿ ನಾಗರಿಕ ಸೇವೆಯನ್ನು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಉದ್ದೇಶದಿಂದ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. ಆ ಪೈಕಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರ ಉಪಸ್ಥಿತಿ ಇಲ್ಲದೆ ತಾವಿದ್ದಲ್ಲಿಂದಲೇ ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ವಿಧೇಯಕ ಕುರಿತು ವಿವರಣೆ ನೀಡಿದರು.
ಈ ಹಿಂದೆ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎರಡೂ ಕಡೆಯವರ ಉಪಸ್ಥಿತಿ ಅನಿವಾರ್ಯವಾಗಿತ್ತು. ಹೀಗಾಗಿ ಸರ್ಕಾರಿ ಕಚೇರಿಯಲ್ಲಿ ಜನಸಂದಣಿ ಹೆಚ್ಚಾಗಿತ್ತು. ಎಲ್ಲರಿಗೂ ಮೂಲಸೌಲಭ್ಯಗಳನ್ನು ಕಲ್ಪಿಸುವುದು ಅಸಾಧ್ಯವಾಗಿತ್ತು. ಹೀಗಾಗಿ ಜನಸಾಮಾನ್ಯರು ಅನಗತ್ಯವಾಗಿ ಉಪ ನೋಂದಣಾಧಿಕಾರಿ ಕಚೇರಿಗೆ ಓಡಾಡುವುದನ್ನು ತಪ್ಪಿಸಲು ತಾಂತ್ರಿಕ ನೋಂದಣಿಗೆ ಅಂಕಿತ ಹಾಕಲಾಗಿದೆ ಎಂದರು.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಕರ್ನಾಟಕ ಹೌಸಿಂಗ್ ಬೋರ್ಡ್, ಸ್ಲಂ ಬೋರ್ಡ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್​ಗಳಂತಹ ನಂಬಿಕಾರ್ಹ ಮೂಲಗಳ ಸಹಾಯದಿಂದ ನಾಗರಿಕರು ತಾಂತ್ರಿಕವಾಗಿಯೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು. ಈ ಹೊಸ ಮಾದರಿ ಮಹಾರಾಷ್ಟ್ರದಲ್ಲಿ ಯಶಸ್ವಿಯಾಗಿದ್ದು, ರಾಜ್ಯದಲ್ಲೂ ಜನರಿಗೆ ಉತ್ತಮ ಆಡಳಿತ ನೀಡಲು ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪೇಪರ್ ಖಾತಾ ರಿಜಿಸ್ಟ್ರೇಷನ್​ಗೂ ತಡೆ:ನೋಂದಣಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಹಣ ಸೋರಿಕೆ ತಡೆಯಲು ಪೇಪರ್ ಖಾತಾ ನೋಂದಣಿಗೆ ತಡೆಯೊಡ್ಡಲು ವಿಧೇಯಕದಲ್ಲಿ ತಿದ್ದುಪಡಿ ತರಲಾಗಿದೆ. ನಗರ ಭಾಗದಲ್ಲಿ ಪೇಪರ್ ಖಾತಾ ಮೂಲಕವೂ ನೋಂದಣಿ ನಡೆಸಲಾಗುತ್ತಿದೆ. ಅನೇಕ ಪ್ರಕರಣಗಳಲ್ಲಿ ನಕಲಿ ಪೇಪರ್ ಖಾತಾ ಬಳಸಿ ನೋಂದಣಿ ಮಾಡುತ್ತಿರುವುದು ತಿಳಿದುಬಂದಿದೆ. ಅಲ್ಲದೆ, ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರೆವೆನ್ಯೂ ಲೇಔಟ್​ಗಳಲ್ಲಿ ಮೂಲ ಮಾರ್ಗಸೂಚಿ ದರವನ್ನೇ ಇಳಿಸಿ ನೋಂದಣಿ ಮಾಡಲಾಗಿತ್ತು. ಪರಿಣಾಮ ಸರ್ಕಾರಕ್ಕೆ 400 ಕೋಟಿ ರೂ. ನಷ್ಟ ಉಂಟಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸಿಎಣ 28 ಉಪನೋಂದಣಾಧಿಕಾರಿಗಳ ವಿರುದ್ಧ ವಿಚಾರಣೆಗೆ ಆದೇಶಿಸಿದ್ದರು. ವಿಚಾರಣೆ ನಡೆಸಿದ್ದ ಸಮಿತಿ, ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ನಿಯಮ ಉಲ್ಲಂಘನೆ ನಡೆದಿಲ್ಲ ಎಂದು ವರದಿ ನೀಡಿದ್ದರು. ಪರಿಣಾಮ ಎಲ್ಲರಿಗೂ ಕ್ಲೀನ್ ಚಿಟ್ ನೀಡಲಾಗಿತ್ತು ಎಂದು ವಿಷಾದಿಸಿದರು. ಇಂತಹ ಪ್ರಕರಣಗಳಲ್ಲಿ ಉಪ ನೋಂದಣಾಧಿಕಾರಿಯನ್ನು ಅಮಾನತು ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಏಕೆಂದರೆ ಅವರು ಒಂದೇ ದಿನದಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಾರೆ. ಪರಿಣಾಮ ಸರ್ಕಾರದ ಮರ್ಯಾದೆ ಹರಾಜಾಗುತ್ತದೆ. ಹೀಗಾಗಿ ಸಮಸ್ಯೆ ಮೂಲವನ್ನು ಹುಡುಕಿ ಅದಕ್ಕೆ ಚಿಕಿತ್ಸೆ ನೀಡಬೇಕಿದೆ. ಇದೇ ಕಾರಣಕ್ಕೆ ವಿಧೇಯಕದಲ್ಲಿ ಮತ್ತೊಂದು ತಿದ್ದುಪಡಿಯನ್ನು ತರಲಾಗಿದೆ ಎಂದು ತಿಳಿಸಿದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fifteen − 11 =
Remember me
