ಬೆಂಗಳೂರು:ಭೂಮಾಪನ ಇಲಾಖೆಯಲ್ಲಿ 750 ಭೂಮಾಪಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಇದನ್ನೂ ಓದಿ:ಕಾವೇರಿ ನೀರು ಬಿಡುಗಡೆ ವಿಚಾರ: ಮಂಗಳವಾರ ಸರ್ವ ಪಕ್ಷಗಳ ಸಭೆ ಕರೆದ ಎಂ.ಕೆ ಸ್ಟಾಲಿನ್
ಇಂದು ವಿಧಾನಸಭೆಯಲ್ಲಿ ರಾಯಭಾಗ ಶಾಸಕ ಐಹೊಳೆ ಮಹಾಲಿಂಗಪ್ಪ, ಮುಳಬಾಗಿಲು ಶಾಸಕ ಸಮೃದ್ದಿ ವಿ. ಮಂಜುನಾಥ್ ಅವರ ಪ್ರಶ್ನೆಗೆ ಭೂಮಾಪನ ಇಲಾಖೆಯಲ್ಲಿ 750 ಭೂಮಾಪಕರ ಹುದ್ದೆಗಳ ಭರ್ತಿಗೆ ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸ ಹುದ್ದೆಗಳನ್ನು ಸೃಜಿಸುವ ಬಗ್ಗೆ ಚರ್ಚೆಯ ಹಂತದಲ್ಲಿದೆ ಎಂದು ಉತ್ತರಿಸಿದರು.
ಮಂದಗತಿಯಲ್ಲಿ ಜರುಗುತ್ತಿದ್ದ ಡ್ರೋನ್ ಸರ್ವೆ ಕಾರ್ಯವನ್ನು ತೀವ್ರಗೊಳಿಸಿ ದತ್ತಾಂಶಗಳನ್ನು ಸಂಗ್ರಹಿಸುವ ಮೂಲಕ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮರು ಭೂಮಾಪನ ಕಾರ್ಯವನ್ನು ತೀವ್ರಗೊಳಿಸಿ ದತ್ತಾಂಶಗಳನ್ನು ಸಂಗ್ರಹಿಸುವ ಮೂಲಕ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮರು ಭೂಮಾಪನ ಕಾರ್ಯವನ್ನು ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡುತ್ತಿದ್ದು ಈ ಯೋಜನೆಯ ಭಾಗವಾಗಿ, ಪ್ರಸ್ತಾಪಿಸಿದ ಗ್ರಾಮಗಳನ್ನು ಸಹ ಸಮಗ್ರವಾಗಿ ಮರು ಭೂಮಾಪನ ಕಾರ್ಯಕ್ಕೆ ಒಳಪಡಿಸಲಾಗುತ್ತಿದ್ದು, ರೈತರಿಗೆ ಶೀಘ್ರ ಪರಿಹಾರ ನೀಡುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿಧಾನಸಭೆಗೆ ತಿಳಿಸಿದರು.
ಪ್ರಸ್ತುತ ಇಲಾಖೆಯಲ್ಲಿ ಲಭ್ಯವಿರುವ ಭೂಮಾಪಕರು ಹಾಗೂ ಪರವಾನಗಿ ಭೂಮಾಪಕರ ಸೇವೆಯನ್ನು ಬಳಸಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಪ್ರಯತ್ನ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
