ಬೆಂಗಳೂರು:ಮುಡಾ ನಿವೇಶನ ಹಂಚಿಕೆ ಹಗರಣ ವಿಚಾರದಲ್ಲಿ ರಾಜಭವನ ಹಾಗೂ ಸರ್ಕಾರದ ನಡುವೆ ನಡೆಯುತ್ತಿರುವ ಪ್ರಾಸಿಕ್ಯೂಷನ್ ಸಂಗ್ರಾಮ ಮತ್ತೊಂದು ಹಂತ ತಲುಪಿದೆ. ತಮ್ಮ ಮುಂದೆ ಬಾಕಿ ಇರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಮೇಲಿನ ಅಭಿಯೋಜನೆ ಅನುಮತಿ ಕೋರಿಕೆಯನ್ನು ಕೂಡಲೇ ನಿರ್ಧರಿಸುವಂತೆ ಸಿದ್ದರಾಮಯ್ಯ ಸಚಿವ ಸಂಪುಟ ರಾಜ್ಯಪಾಲರನ್ನು ಒತ್ತಾಯಿಸಿದೆ. ಆ ಮೂಲಕ ಪ್ರಾಸಿಕ್ಯೂಷನ್ ಬಾಣವನ್ನು ಬಿಜೆಪಿ, ಜೆಡಿಎಸ್ ಮೈತ್ರಿಪಕ್ಷಗಳತ್ತ ತಿರುಗಿಸಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆಗೆ ಅನುಮೋದನೆ ನೀಡುವಂತೆ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಸುವುದಕ್ಕೆ ಪೂರ್ವಾನುಮತಿ ನೀಡುವಂತೆ ಬಂದಿರುವ ಅರ್ಜಿಯನ್ನು ತಕ್ಷಣ ಇತ್ಯರ್ಥಪಡಿಸಿ ಕಾನೂನು ಪ್ರಕ್ರಿಯೆ ಸುಗಮಗೊಳಿಸುವಂತೆ ರಾಜ್ಯಪಾಲರ ಎದುರು ಸಲಹೆ ರೂಪದ ಆಗ್ರಹ ಮುಂದಿಟ್ಟು ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯವನ್ನು ರಾಜ್ಯಪಾಲರಿಗೆ ತಕ್ಷಣವೇ ಕಳಿಸಲಾಗುತ್ತದೆ. ಜತೆಗೆ ರಾಜ್ಯಪಾಲರಿಗಿರುವ ವಿವೇಚನಾಧಿಕಾರದ ಬಗ್ಗೆಯೂ ನಿರ್ಣಯದಲ್ಲಿ ಗಮನ ಸೆಳೆಯಲು ನಿರ್ಧರಿಸಲಾಗಿದೆ. ಸಂಪುಟ ಸಭೆಯ ಸಲಹೆಯನ್ನು ರಾಜ್ಯಪಾಲರು ಒಪ್ಪಬೇಕಾಗುತ್ತದೆ, ರಾಜ್ಯಪಾಲರ ವಿವೇಚನಾಧಿಕಾರ ಸೀಮಿತ ಎಂದು ಸಂಪುಟ ಅಭಿಪ್ರಾಯಪಟ್ಟಿದೆ.
ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ್, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರಡಿ ತನಿಖಾ ಸಂಸ್ಥೆಗಳು ಸಲ್ಲಿಸಿದ ಅರ್ಜಿಗಳು ರಾಜ್ಯಪಾಲರ ಮುಂದೆ ಬಾಕಿ ಇವೆ. ಅವರು ಅರ್ಜಿಯ ಬಗ್ಗೆ ನಿರ್ಣಯ ಕೈಗೊಳ್ಳಬೇಕಾಗುತ್ತದೆ ಎಂದರು.
ರಾಜ್ಯಪಾಲರು ಸಚಿವ ಸಂಪುಟದ ಸಲಹೆಯನ್ನು ಸ್ವೀಕರಿಸಲು ಬಾಧ್ಯಸ್ಥರಾಗಿದ್ದು, ಈ ವಿಷಯದಲ್ಲಿ ಅವರು ತಮ್ಮ ವಿವೇಚನೆಯನ್ನು ನ್ಯಾಯಯುತವಾಗಿ ಬಳಸಿಕೊಳ್ಳುವ ವಿಶ್ವಾಸವಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿ ರಾಜ್ಯಪಾಲರಿಗೆ ದೂರು ನೀಡಿದ್ದು, ತರಾತುರಿಯಲ್ಲಿ ಸಂಜೆಯೊಳಗಾಗಿ ಶೋಕಾಸು ನೋಟೀಸು ನೀಡಲಾಗಿದೆ. ಆದರೆ, ಈ ನಾಲ್ಕು ಪ್ರಕರಣಗಳು ಭಿನ್ನವಾಗಿದೆ. ಎಲ್ಲಾ ಪ್ರಕ್ರಿಯೆಗಳು ಮುಗಿದರೂ ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿವರಿಸಿದರು. ಸಾರ್ವಜನಿಕರ ದೃಷ್ಟಿಯಲ್ಲಿ ರಾಜ್ಯಪಾಲರ ಕಚೇರಿ ಬಗ್ಗೆ ತಪ್ಪು ಭಾವನೆ ಬರಬಾರದು ಮತ್ತು ಯಾವುದೇ ಗೊಂದಲ ಆಗಬಾರದೆಂದು ಸಚಿವ ಸಂಪುಟ ನೆರವು ಮತ್ತು ಸಲಹೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.
ಎರಡೆರಡು ಸಂಪುಟ ಸಭೆ: ಗುರುವಾರ ಸರ್ಕಾರದ ಹಂತದಲ್ಲಿ ಅಚ್ಚರಿ ನಡೆಯಿತು. ಸಿದ್ದರಾಮಯ್ಯ ನೇತೃತ್ವದಲ್ಲಿ ಒಂದು ಸಂಪುಟ ನಡೆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇನ್ನೊಂದು ಸಂಪುಟ ಸಭೆ ನಡೆಯಿತು. ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಆಧರಿಸಿ ತನಿಖೆ ನಡೆಸುವುದಕ್ಕೆ ಪೂರ್ವಾನುಮೋದನೆ ನೀಡಬಾರದು ಎಂದು ರಾಜ್ಯಪಾಲರಿಗೆ ನೀಡುವ ಉದ್ದೇಶದಿಂದ ಕೈಗೊಂಡಿದ್ದ 90 ಪುಟಗಳ ನಿರ್ಣಯವನ್ನು ಮೊದಲ ಸಂಪುಟ ಸಭೆಯಲ್ಲಿ ದೃಢೀಕರಿಸಲಾಗಿದೆ. ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಸಭೆ ಮುನ್ನಡೆಸಿದ್ದರು. ಬಳಿಕ ಇನ್ನೊಂದು ಸಭೆಯಲ್ಲಿ ಸಿಎಂ ಭಾಗಿಯಾಗಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two + three =
Remember me
