ಮಂಡ್ಯ:ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿರುವುದನ್ನು ವಿರೋಧಿಸಿ ಒಂದರ ಮೇಲೊಂದರಂತೆ ಬೆಂಗಳೂರು ಹಾಗೂ ಕರ್ನಾಟಕ ಬಂದ್​ ನಡೆಸಿದ್ದರೂ ಕಾವೇರಿ ನೀರು ತಮಿಳುನಾಡಿಗೆ ಹರಿದುಹೋಗುತ್ತಿರುವುದು ನಿಂತಿಲ್ಲ. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಇಂದು ಕೆಆರ್​​ಎಸ್​ ಡ್ಯಾಮ್​ಗೇ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ರಾಷ್ಟ್ರೀಯ ಪ್ರಜಾಪ್ರಭುತ್ವ ಸೇನೆ ನೇತೃತ್ವದಲ್ಲಿ ಇಂದು ಮಂಡ್ಯಕ್ಕೆ ಬಂದಿದ್ದ ಹೋರಾಟಗಾರರು, ಕೆಆರ್​ಎಸ್ ಡ್ಯಾಮ್ ಎದುರು ಪ್ರತಿಭಟನೆ ನಡೆಸಿದರು. ಬೆಂಗಳೂರಿನಿಂದ ಬಂದಿದ್ದ ಈ ಹೋರಾಟಗಾರರು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದನ್ನೂ ಓದಿ:ನಾನು ಈ 2 ವಿಷಯಗಳಲ್ಲಿ ಇನ್ನೂ ಶಿಸ್ತು ರೂಢಿಸಿಕೊಳ್ಳಬೇಕಾಗಿದೆ: ಪ್ರಧಾನಿ ನರೇಂದ್ರ ಮೋದಿ
ಕನ್ನಡ ಬಾವುಟ ಹಿಡಿದು ಬಂದಿದ್ದ ಈ ಹೋರಾಟಗಾರರು ಬಳಿಕ ಕೆಆರ್​ಎಸ್​ ಡ್ಯಾಮ್​ನ ಮುಖ್ಯದ್ವಾರದ ಬಳಿ ತೆರಳಲು ನುಗ್ಗಿದರು. ಆ ಮೂಲಕ ಕೆಆರ್​ಎಸ್​ ಡ್ಯಾಮ್​ಗೇ ಮುತ್ತಿಗೆ ಹಾಕುವ ಪ್ರಯತ್ನ ಅವರದ್ದಾಗಿತ್ತು. ಆದರೆ ಕೂಡಲೇ ಎಚ್ಚೆತ್ತ ಪೊಲೀಸರು ಅವರನ್ನು ಗೇಟ್​ ಬಳಿಯೇ ತಡೆದು, ಬಂಧಿಸಿದರು. ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸುತ್ತಿದ್ದ ಅವರನ್ನು ಪೊಲೀಸ್ ವಾಹನದಲ್ಲಿ ತುಂಬಿ ಕರೆದೊಯ್ಯಲಾಯಿತು.
ಓ.. ಮತ್ತೆ ಸದ್ದು ಮಾಡುತ್ತಿರುವ ‘ಕಾಂತಾರ’; ವರ್ಷದ ಬಳಿಕವೂ ನೆನಪಿಸಿಕೊಳ್ಳುತ್ತಿರುವ ಜನರು..

ಲಕ್ಷುರಿ ಕಾರಲ್ಲಿ ಬಂದು ಸೊಪ್ಪು ಮಾರಿದ ರೈತ!; ಮಾರ್ಕೆಟ್​ಗೆ ಬರ್ತಿದ್ದಂತೆ ಪಂಚೆ ಬಿಚ್ಚಿ ವ್ಯಾಪಾರಕ್ಕಿಳಿದ ವಿಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + seventeen =
Remember me
