ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗವು ಪರೀಕ್ಷಾ ಫಲಿತಾಂಶ ಪ್ರಕಟಿಸಲು ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಅಭ್ಯರ್ಥಿಗಳು ನಿನ್ನೆ ಕೆಪಿಎಸ್​ಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ಇಂದು ಅವರ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.
ಕಾಂಗ್ರೆಸ್​ ವಕ್ತಾರೆ ಭವ್ಯಾ ನರಸಿಂಹಮೂರ್ತಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ಆಕೆಯ ಜೊತೆಗೆ ಇನ್ನೂ ಆರು ಮಂದಿಯ ವಿರುದ್ಧ ವಿಧಾನಸೌಧ ಠಾಣೆಯ ಪೊಲೀಸರು ಎಫ್​ಐಆರ್ ದಾಖಲು ಮಾಡಿದ್ದಾರೆ.
ನಿನ್ನೆ ಭವ್ಯಾ ನೇತೃತ್ವದಲ್ಲಿ ಸುಮಾರು 200 ಮಂದಿ ಕೆಪಿಎಸ್​​ಸಿ ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದಾರೆ. ಅನುಮತಿ ಪಡೆಯದೇ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ, ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಆಗುತ್ತಿದ್ದು, ಸ್ಥಳ ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ ಅವರು ಪ್ರತಿಭಟನೆ ಮುಂದುವರಿಸಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಷ್ಟೇ ಅಲ್ಲದೆ, ತಮ್ಮ ಸೂಚನೆಯನ್ನು ಲೆಕ್ಕಿಸದೆ ಸ್ಥಳ ತೆರವುಗೊಳಿಸದ ಇವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.
ಆಸ್ಪತ್ರೇಲಿ ಬಿಸಿನೀರಿಲ್ಲ, ಊಟ ಸರಿ ಇಲ್ಲ ಎಂದು ಹೇಳಿ ವೈದ್ಯಕೀಯ ಪರೀಕ್ಷೆಗೆ ಸಹಕರಿಸದ ನವ್ಯಶ್ರೀ..

ಪೊಲೀಸರ ಮೇಲಿನ ಸಿಟ್ಟಿಗೆ ಹೊಯ್ಸಳ ವಾಹನಕ್ಕೇ ಪೆಟ್ರೋಲ್ ಸುರಿದು ಬೆಂಕಿ ಇಟ್ಟ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
