ಬೆಂಗಳೂರು:ಮೇಲಧಿಕಾರಿಗಳ ಕಿರುಕುಳ ಖಂಡಿಸಿ ಹಾಗೂ ಗೂಂಡಾಗಳಿಂದ ಜೀವ ಬೆದರಿಕೆ ಇರುವುದರಿಂದ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಇಬ್ಬರು ಸರ್ಕಾರಿ ನೌಕರರು ಆರ್.ಸುಬ್ಬಣ್ಣ ವೃತ್ತದ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೀದರ್ ಜಿಲ್ಲೆಯ ಜನವಾಡ ಹೋಬಳಿಯ ಚಿಂಚೋಳಿ ಗ್ರಾಮ ಪಂಚಾಯ್ತಿಯ ಪಿಡಿಒ ಮಂಗಳಾ ಕಾಂಬಳೆ ಹಾಗೂ ಅರಣ್ಯ ಅಭಿವೃದ್ಧಿ ನಿಗಮದಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರಥಮ ದರ್ಜೆ ಸಹಾಯಕ ಎಂ.ಪಾಪೇಗೌಡ ಎಂಬುವರು ಮೇಲಧಿಕಾರಿಗಳ ಕಿರುಕುಳ ಹಾಗೂ ಗೂಂಡಾಗಳಿಂದ ಜೀವ ಬೆದರಿಕೆ ಇರುವುದರಿಂದ ರಕ್ಷಣೆ ನೀಡುವಂತೆ ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಪಿಡಿಒ ಮಂಗಳಾ ಕಾಂಬಳೆ ಮಾತನಾಡಿ, ಸರ್ಕಾರದಿಂದ ಬರುವ ಅನುದಾನವನ್ನು ವೈಯಕ್ತಿಕವಾಗಿ ತಮಗೆ ನೀಡುವಂತೆ ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿ ನಿತ್ಯ ಕಿರುಕುಳ ಕೊಡುತ್ತಿದ್ದಾರೆ. ಸರ್ಕಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲು ಬರುವುದಿಲ್ಲ ಎಂದು ತಿಳಿಹೇಳಿದ್ದರೂ ಸದಸ್ಯರು ಕೇಳುತ್ತಿಲ್ಲ. ಗೂಂಡಾಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ. ಪ್ರತಿ ನಿತ್ಯ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ. ಅನುದಾನ ಕೊಡುತ್ತಿದ್ದರೆ ಕೊಲೆ ಮಾಡುವುದಾಗಿ ಸದಸ್ಯರು ಬೆದರಿಕೆ ಹಾಕಿದ್ದಾರೆ. ಈಗಾಗಲೇ ಸಾಕಷ್ಟು ಬಾರಿ ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಮನೆಗೆ ನುಗ್ಗಿ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಈಗಿನವರೆಗೂ ನನಗೆ ರಕ್ಷಣೆ ನೀಡಿಲ್ಲ. ಆದ್ದರಿಂದ, ನ್ಯಾಯ ಸಿಗುವರೆಗೂ ಹೋರಾಟ ನಡೆಸುತ್ತೇನೆ ಎಂದರು.
ಎಂ.ಪಾಪೇಗೌಡ ಮಾತನಾಡಿ, ಇಲಾಖೆಯ ಕೆಲ ಅಧಿಕಾರಿಗಳು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ 52 ಎಕರೆ ಅರಣ್ಯ ಭೂಮಿಯನ್ನು ಕಾನೂನು ಬಾಹಿರವಾಗಿ ಭೂಮಾಫಿಯದವರಿಗೆ ಪರಭಾರೆ ಮಾಡಿದ್ದಾರೆ. ಅಲ್ಲದೆ, ಅಕ್ರಮವಾಗಿ 2 ಕೋಟಿ ಮೌಲ್ಯದ ಮರಗಳನ್ನು ಹಂಚಿಕೆ ಮಾಡಿದ್ದಾರೆ. ಈ ಬಗ್ಗೆ ಆರ್‌ಟಿಐನಲ್ಲಿ ದಾಖಲೆ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಆದರೆ, ಅರಣ್ಯ ಭೂಮಿ ರಕ್ಷಿಸುವಂತೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ ಎಂಬ ಕಾರಣಕ್ಕಾಗಿ 16 ಬಾರಿ ನನ್ನನ್ನು ವರ್ಗಾವಣೆ ಮಾಡಲಾಗಿದೆ. ಅನ್ಯ ಕಾರಣವೊಡ್ಡಿ ಸಸ್ಪೆಂಡ್ ಸಹ ಮಾಡಲಾಗಿದೆ. ಆರು ತಿಂಗಳಿಂದ ವೇತನವಾಗಿಲ್ಲ. ಹಾಗಾಗಿ, ನನ್ನ ಸಮಸ್ಯೆ ಬಗೆಹರಿಯುವರೆಗೂ ಹೋರಾಟ ಮಾಡುತ್ತೇನೆ ಎಂದರು.
ಪಡಿತರ ಅಕ್ಕಿ ಮಾರಾಟ ಮಾಡಿ ಸಿಕ್ಕಿಬಿದ್ದರೆ 6 ತಿಂಗಳು ಕಾರ್ಡ್ ಸಸ್ಪೆಂಡ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
