ವಿಜಯಪುರ:ಜಿಲ್ಲಾಧಿಕಾರಿಯೊಬ್ಬರ ಮನೆ ಮುಂದೆ ರಾತ್ರೋರಾತ್ರಿ ನೂರಾರು ಮಂದಿ ಜಮಾವಣೆಗೊಂಡಿದ್ದು, ಅವ್ಯವಸ್ಥೆಯೊಂದನ್ನು ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ ಪ್ರಕರಣವೊಂದು ಇಂದು ನಡೆದಿದೆ. ವಿಜಯಪುರದ ಜಿಲ್ಲಾಧಿಕಾರಿಯ ನಿವಾಸದ ಮುಂದೆ ಈ ಪ್ರತಿಭಟನೆ ನಡೆದಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಮಂಗಳವಾರ ರಾತ್ರಿ ದಿಢೀರನೆ ಜಿಲ್ಲಾಧಿಕಾರಿ ಮನೆ ನಿವಾಸದೆದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಭೂತನಾಳದ ಎಸ್​ಸಿ-ಎಸ್​ಟಿ ವಸತಿ ನಿಲಯ ಅವ್ಯವಸ್ಥೆಯ ಆಗರವಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ವಸತಿ ನಿಲಯದಿಂದ ಜಿಲ್ಲಾಧಿಕಾರಿ ಮನೆಯವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮನೆ ಎದುರು ಪ್ರತಿಭಟನೆ ನಡೆಸಿದರು. ವಾರ್ಡನ್ ವಿರುದ್ದ ಘೋಷಣೆ ಕೂಗಿದರು. ಅಲ್ಲದೇ ಕೂಡಲೇ ವಸತಿ ನಿಲಯಕ್ಕೆ ಭೇಟಿ ನೀಡಿ ಸಮಸ್ಯೆ ಬಗೆ ಹರಿಸುವಂತೆ ಘೋಷಣೆ ಕೂಗಿದರು.
ಆಹಾರ ಗುಣಮಟ್ಟ ಸಂಪೂರ್ಣ ಕಳಪೆಯಾಗಿದೆ, ಇದರಿಂದಾಗಿ ವಿದ್ಯಾರ್ಥಿಗಳ ಆರೋಗ್ಯದ ಹದಗೆಡುತ್ತಿದೆ, ವಾರ್ಡನ್ ಕಿರಿಕಿರಿ, ಮೂಲಭೂತ ಸೌಕರ್ಯಗಳ ಕೊರತೆ ವ್ಯಾಪಕವಾಗಿದೆ. ನಮ್ಮ ನೋವಿಗೆ ಸ್ಪಂದಿಸಿ ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ನಿವಾಸದ ಮುಂದೆ ಅಳಲು ತೋಡಿಕೊಂಡರು.
ವಿದ್ಯುತ್ ಸ್ಪರ್ಶದಿಂದಾಗಿ ‘ಜೂನಿಯರ್ ರವಿಚಂದ್ರನ್​’ ಸಾವು…

ಸುಪ್ರಭಾತ ಅಭಿಯಾನ ಹಿಂಪಡೆದ ಶ್ರೀರಾಮಸೇನೆ; ಅದಕ್ಕೆ ಕಾರಣವಿದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − two =
Remember me
