ಬೆಂಗಳೂರು:ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬೆಂಗಳೂರಿನಾದ್ಯಂತ ಮಂಗಳವಾರ (ಸೆ.26) ಪ್ರತಿಭಟನೆ ನಡೆಸಲು ಕನ್ನಡ ಪರ ಸಂಘಟನೆಗಳು ಮುಂದಾಗಿದ್ದು, ಈ ಕುರಿತು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠರಾದ ಎಚ್​.ಡಿ.ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಅಯೋಧ್ಯೆ ರಾಮಮಂದಿರ: 100 ಕೋಟಿ ರೂ. ಮೌಲ್ಯದ ಕಮಲ ಆಕಾರದ ಕಾರಂಜಿಗೆ ಸರ್ಕಾರ ಅಸ್ತು
“ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಾಳೆ (ಸೆ.26) ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದಾರೆ. ಪ್ರತಿಭಟನೆ ಶಾಂತಿಯಿಂದ ನಡೆಯಬೇಕು. ಪ್ರತಿಭಟನೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಮನಸ್ಸಿನಲ್ಲಿರುವ ನೋವನ್ನು ವ್ಯಕಪಡಿಸಲು ಇದನ್ನು ಮಾಡುತ್ತಿದ್ದಾರೆ ಅಷ್ಟೇ” ಎಂದು ಹೇಳಿದರು.
ಇದನ್ನೂ ಓದಿ:ತಮಿಳುನಾಡಿನ ಸಂಸದರೆಲ್ಲರು ಒಟ್ಟಾಗಿದ್ದಾರೆ ನಮ್ಮಲ್ಲಿ 28 ಸಂಸದರಿದ್ರೂ ಮೂರು ಭಾಗವಾಗಿದ್ದೇವೆ: ಎಚ್​ಡಿಡಿ ಬೇಸರ
“ತಮಿಳುನಾಡು ಅಣ್ಣ-ತಮ್ಮಂದಿರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಎಚ್.ಡಿ. ಕುಮಾರಸ್ವಾಮಿ ಡ್ಯಾಂಗೆ ತೆರಳಿ ಮಾಹಿತಿ ನೀಡಿದ್ದಾರೆ. ಈ ಕುರಿತು ನಾನು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರದಿದ್ದೇನೆ. ಪ್ರಧಾನಿಗಳು ಖಂಡಿತವಾಗಿ ಇದಕ್ಕ ಪ್ರತಿಕ್ರಿಯೆ ನೀಡುತ್ತಾರೆ ಎಂಬ ನಂಬಿಕೆಯಿದೆ, ಅದನ್ನು ಈಗಲೂ ನಂಬುತ್ತೇನೆ, ನಾಳೆಯೂ ನಂಬುತ್ತೇನೆ” ಎಂದು ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರ: 100 ಕೋಟಿ ರೂ. ಮೌಲ್ಯದ ಕಮಲ ಆಕಾರದ ಕಾರಂಜಿಗೆ ಸರ್ಕಾರ ಅಸ್ತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
