ಮಂಡ್ಯ:ಸಕ್ಕರೆನಾಡಿನಲ್ಲಿ ನಿನ್ನೆ ನಡೆದಿದ್ದ ಪ್ರತಿಭಟನೆಗೆ ಪ್ರತಿಯಾಗಿ ಇಂದು ಮತ್ತೊಂದು ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ಸಂಸದೆ ಸುಮಲತಾ ಅಂಬರೀಷ್ ಎದುರೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಚಿಕ್ಕಮಂಡ್ಯ ಗ್ರಾಮದ ಬಳಿ ಈ ಪ್ರತಿಭಟನೆ ನಡೆದಿದೆ.
ಇಲ್ಲಿನ ನಾಲೆಯೊಂದನ್ನು ಒಡೆಯಬೇಕು ಎಂದು ನಿನ್ನೆ ಬೀಡಿ ಕಾಲನಿ ಜನರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಶಾಶ್ವತ ಪರಿಹಾರಕ್ಕಾಗಿ ಪಟ್ಟು ಹಿಡಿದಿದ್ದರು. ನಾಲೆ ಒಡೆದು ಬೀಡಿ ಕಾಲನಿಗೆ ನೀರು ನುಗ್ಗುವುದನ್ನು ತಪ್ಪಿಸಿ ಎಂದು ಪ್ರತಿಭಟನೆ ನಡೆಸಿದ್ದರು. ಆ ಬಗ್ಗೆ ಡಿಸಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈ ಬಿಟ್ಟಿದ್ದರು.
ನಾಲೆ ಒಡೆದು ಹಾಕಿದರೆ 750 ಎಕರೆ ಜಮೀನಿಗೆ ಹಾನಿಯಾಗುತ್ತದೆ. ಹೀಗಾಗಿ ನಾಲೆ ಒಡೆಯಬಾರದು ಎಂದು ರೈತರ ಪಟ್ಟುಹಿಡಿದಿದ್ದರು. ಸ್ಥಳದಲ್ಲಿ ತಹಶೀಲ್ದಾರ್ ಭರವಸೆ ಕೊಟ್ಟ ಬಳಿಕ ಪ್ರತಿಭಟನೆ ಕೈ ಬಿಟ್ಟ ಚಿಕ್ಕಮಂಡ್ಯ ಗ್ರಾಮಸ್ಥರು, ನಂತರ ಸಂಸದೆ ಸುಮಲತಾ ಅವರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ತಹಶೀಲ್ದಾರ್​ ಹಾಗೂ ಸಂಸದೆ ಇಬ್ಬರೂ ನಾಲೆ ಒಡೆಸುವುದಿಲ್ಲ ಎಂದು ಭರವಸೆ ಕೊಟ್ಟ ಬಳಿಕ ಗ್ರಾಮಸ್ಥರು ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ.
ಮಲಬದ್ಧತೆಯಿಂದ ತೊಂದರೆ ಅನುಭವಿಸುತ್ತಿದ್ದೀರಾ?; ಇಲ್ಲಿದೆ ನೋಡಿ ಪರಿಣಾಮಕಾರಿ ಮನೆಮದ್ದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − seven =
Remember me
