ಬೆಂಗಳೂರು: ರಾಜ್ಯದಲ್ಲಿದ್ದ ಸಿಇಟಿ ಮೂಲಕ ರಾಜ್ಯದ ಮೂಲೆ ಮೂಲೆಗಳಿಂದ ವೈದ್ಯಕೀಯ ಶಿಕ್ಷಣ ಪಡೆಯಲು ಅರ್ಹತೆ ಪಡೆಯುತ್ತಿದ್ದರು. ಆದರೆ,ನೀಟ್‌ನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆರೋಪಿಸಿದರು.
ನೀಟ್ ಹಗರಣದ ವಿರುದ್ಧ ಆಮ್ ಆದ್ಮಿ ಪಾರ್ಟಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರುಈ ಹಿಂದೆ ಕಳೆದ ಐದಾರು ವರ್ಷದಲ್ಲಿ ನೀಟ್‌ನಲ್ಲಿ ಒಬ್ಬರು ಅಥವಾ ಇಬ್ಬರು ಮಾತ್ರ ಮೊದಲ ರ‌್ಯಾಂಕ್ ಪಡೆಯುತ್ತಿದರು. ಆದರೆ,ಈ ಬಾರಿ 67 ವಿದ್ಯಾರ್ಥಿಗಳು 720ಕ್ಕೆ 720 ಅಂಕ ಪಡೆದಿದ್ದು ಸಾಕಷ್ಟ ಅನುಮಾನಗಳಿಗೆ ಕಾರಣವಾಗಿದೆ.ಅಲ್ಲದೆ, ಒಂದೇ ಕೊಠಡಿಯಲ್ಲಿನ ಆರು ಮಕ್ಕಳು 720 ಕ್ಕೆ 720 ಅಂಕ ಪಡೆಯುತ್ತಾರೆ ಎಂದರೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮೆಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡು ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಸಮಿತಿ ರಚನೆ ಮಾಡಿ, ನಮ್ಮ ರಾಜ್ಯಕ್ಕೆ ನೀಟ್ ಅವಶ್ಯಕತೆ ಇಲ್ಲ ಎಂದು ಕಾನೂನಾತ್ಮಕವಾಗಿ ಹೋರಾಟ ಮಾಡಲಿ. ನೀಟ್‌ನಿಂದ ರಾಜ್ಯಕ್ಕೆ ವಿನಾಯಿತಿ ಸಿಗುವ ಮಸೂದೆಯನ್ನು ಅಂಗೀಕರಿಸಲಿ. ಪಿಯುಸಿ ಮತ್ತು ಸಿಇಟಿಯಲ್ಲಿ ಪಡೆಯುವ ಅಂಕಗಳನ್ನು ಮಾತ್ರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಮಾನದಂಡವಾಗಿ ಪರಿಗಣಿಸಲಿ.ಜತೆಗೆ ರಾಜ್ಯದ ಎಲ್ಲ ಶಾಸಕರು, ಸಂಸದರು ಲೋಕಸಭೆ ಮುಂದೆ ಹೋರಾಟ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದೇವೆ. ಎಂದು ಹೇಳಿದ ಅವರು ಎಲ್ಲರೂ ನೀಟ್ ವಿರುದ್ಧ ಎಲ್ಲರು ಪಕ್ಷಾತೀತವಾಗಿ ದನಿ ಎತ್ತಿ ಆಗುತ್ತಿರುವ ಅನ್ಯಾಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.
ಆಮ್ ಆದ್ಮಿ ಪಾರ್ಟಿ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಮಾತನಾಡಿ, ಕಳೆದ 15-20 ದಿನಗಳಿಂದ ಇಡೀ ದೇಶ ಈ ಹಗರಣದ ಬಗ್ಗೆ ಮಾತನಾಡುತ್ತಿದೆ. ಸುಪ್ರೀಂ ಕೋರ್ಟ್ ಕೂಡ ಕೇಂದ್ರ ಸರ್ಕಾರಕ್ಕೆ ಇದರ ಬಗ್ಗೆ ಪ್ರಶ್ನೆ ಮಾಡಿದೆ. ಆದರೂ ಕೂಡ, ಕೇಂದ್ರ ಸಚಿವರು ಈ ಕುರಿತು ತುಟಿ ಬಿಚ್ಚುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
’ನೀಟ್ ಪರೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಅನ್ಯಾಯ ಮಾಡುತ್ತಿರುವ ಮೋದಿ ಸರ್ಕಾರಕ್ಕೆ ಧಿಕ್ಕಾರ’, ’ನೀಟ್ ಒಕ್ಕೂಟ ವ್ಯವಸ್ಥೆ ವಿರೋಧಿ’,ನೀಟ್ ಹಗರಣದಲ್ಲಿ ಭಾಗಿಯಾದ ಮೋದಿ ಸರ್ಕಾರಕ್ಕೆ ಧಿಕ್ಕಾರ’ ಎನ್ನುವ ಘೋಷಣೆಗಳನ್ನು ಕೂಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಪಕ್ಷದ ಮುಖಂಡರು ಹಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − seven =
Remember me
