ಹಾವೇರಿ:ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಆಡಿಸಲು 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ಪಿಎಸ್​ಐ ಹಾಗೂ ಕಾನ್​ಸ್ಟೇಬಲ್ ಲೊಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ:ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್: ಹೊಸ ಬಾಂಬ್‌ ಸಿಡಿಸಿದ ದೇವರಾಜೇಗೌಡ
ತಡಸ ಠಾಣೆ ಪಿಎಸ್ಐ ಶರಣಬಸಪ್ಪ ಕಾಂದೆ ಹಾಗೂ ಕಾನ್ ಸ್ಟೇಬಲ್ ಸುರೇಶ ಮಾನೋಜಿ ಲಂಚ ಪಡೆಯಲು ಹೋಗಿ‌ ಲೋಕಾ ಬಲೆಗೆ ಬಿದ್ದವರು.ಇಸ್ಪೀಟ್ ಆಡಿಸಲು ಐದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶುಕ್ರವಾರ ಮಧ್ಯವರ್ತಿ ಕಿರಣ‌ ವನಹಳ್ಳಿ ಎಂಬುವರ ಮೂಲಕ ಮುಂಗಡವಾಗಿ ಎರಡು ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತಡಸ ಗ್ರಾಮದ ಪ್ರಭಾಕರ ಬೆಟದೂರ ಎಂಬುವರ ದೂರಿನ ಮೇರೆಗೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ ಪಿ ಬಿ.ಪಿ.ಚಂದ್ರಶೇಖರ ನೇತೃತ್ವದಲ್ಲಿ ದಾಳಿ ನಡೆದಿದೆ. ತನಿಖಾಧಿಕಾರಿಗಳಾದ ಮಂಜುನಾಥ ಪಂಡಿತ ಹಾಗೂ ದಾವಣಗೆರೆ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ತಂಡದಲ್ಲಿದ್ದರು. ಆರೋಪಿತರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.
ದೇಶದ ಮಹಿಳೆಯರು ಯಾಕೆ ಉಚಿತ ಬಸ್‌ ಪ್ರಯಾಣ ಮಾಡಬಾರದು: ಮೋದಿಗೆ ಕೇಜ್ರಿವಾಲ್‌ ಪ್ರಶ್ನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 2 =
Remember me
