ಬೆಂಗಳೂರು:ಪಿ.ಎಸ್.ಐ.ಮತ್ತು ಸಿಟಿಐ(ಕಮರ್ಷಿಯಲ್‌ ಟ್ಯಾಕ್ಸ್ ಇನ್ಸ್ಪೆಕ್ಟರ್) ಪರೀಕ್ಷೆ ಪತ್ರಿಕೆ ಲೀಕ್ ಮಾಡಿರುವ ಆರೋಪ ಕೇಳಿ ಬಂದಿದೆ. ಇಂಟೆಲಿಜೆನ್ಸ್ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಲಿಂಗಯ್ಯ ಎಂಬ ಅಧಿಕಾರಿ ಪ್ರಶ್ನೆ ಪತ್ರಿಕೆ ಲೀಕ್​ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ.
545 ಪಿಎಸ್​ಐ ಹುದ್ದೆ ಸಿಟಿಐ(ಕಮರ್ಷಿಯಲ್‌ ಟ್ಯಾಕ್ಸ್ ಇನ್ಸ್ಪೆಕ್ಟರ್) ಕೆಪಿಎಸ್​​ಸಿ ನಡೆಸುತ್ತಿರುವ ಪರೀಕ್ಷೆ ಇದಾಗಿದೆ. ಇತ್ತ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಹಾಗೂ ವಾಟ್ಸ್​ಆ್ಯಪ್​ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೂರಾರು ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮಾಡಿದ್ಧಾರೆ.
ಹಣಕ್ಕೆ ಬೇಡಿಕೆ, ಪರೀಕ್ಷೆ ವಿಚಾರವಾಗಿ ಡೀಲ್ ಬಗ್ಗೆ ಲಿಂಗಯ್ಯ ಮಾತಾಡಿದ್ದಾರೆ ಎನ್ನುವ ಆಡಿಯೋ, ವಾಟ್ಸಾಪ್​ ಚಾಟ್ ವೈರಲ್​ ಹಿನ್ನೆಲೆ ಚಂದ್ರಾಲೇಔಟ್ ಠಾಣೆಯಲ್ಲಿ ಪರೀಕ್ಷಾರ್ಥಿಗಳು ದೂರು ನೀಡಿದ್ದಾರೆ. ಇತ್ತ ನೂರಾರು ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಆರೋಪಿಸಿ ದೂರು ದಾಖಲಿಸುತ್ತಿದ್ದಂತೆ ಎಚ್ಚೆತ್ತ ಸಿಸಿಬಿ ಅಧಿಕಾರಿಗಳು ಪಿಎಸ್​ಐ ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + fifteen =
Remember me
