ಬೆಂಗಳೂರುಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇರ ನೇಮಕಾತಿ ಮರುಪರೀಕ್ಷೆಯು ಮಂಗಳವಾರ (ಜ.23) ಬೆಂಗಳೂರಿನ 117 ಕೇಂದ್ರಗಳಲ್ಲಿ ನಡೆಯಲಿದೆ. ಅಕ್ರಮಕ್ಕೆ ಆಸ್ಪದ ಕೊಡಬಾರದೆಂಬ ಉದ್ದೇಶದಿಂದ ಬಿಗಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಿದ್ದು, ರ‌್ಯಾಂಡಮ್ ಆಗಿ ಪರೀಕ್ಷಾ ಕೇಂದ್ರಗಳ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈಗಾಗಲೇ ಸೂಚಿಸಿಸುವಂತೆ ಅಭ್ಯರ್ಥಿಗಳು ವಸ್ತ್ರಸಂಹಿತೆಯನ್ನು ಪಾಲಿಸಬೇಕೆಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಪರೀಕ್ಷೆಯು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರ ವರೆಗೆ ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರ ವರೆಗೆ ನಡೆಯಲಿದ್ದು, ಪ್ರತೀ ಪರೀಕ್ಷಾ ಕೇಂದ್ರದಲ್ಲಿಯೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿ 6 ಮಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, 54 ಸಾವಿರ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಪೊಲೀಸರು ಪರೀಕ್ಷಾ ಕೇಂದ್ರಗಳ ಸುತ್ತ ಅನುಮಾನಾಸ್ಪದವಾಗಿ ಓಡಾಡುವವರು, ಗಾಳಿ ಸುದ್ದಿ ಹಬ್ಬಿಸುವ ಕಿಡಿಗೇಡಿಗಳು ಮತ್ತು ಜೆರಾಕ್ಸ್ ಅಂಗಡಿಗಳ ಮೇಲೆ ಹದ್ದಿನ ಕಣ್ಣಿಡಲಿದ್ದಾರೆ. 200 ಮೀ. ಸುತ್ತ ನಿಷೇಧಾಜ್ಞೆ ೋಷಿಸಿದೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗುವುದು. ಜತೆಗೆ, ಪರೀಕ್ಷಾ ಕೇಂದ್ರಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಭೇಟಿ ನೀಡಲಿದ್ದಾರೆ.
ಅಭ್ಯರ್ಥಿಗಳು ವಸ್ತ್ರ ಸಂಹಿತೆಯಲ್ಲಿನ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನಾಗಲಿ, ಮೊಬೈಲ್ ಇರುವುದನ್ನು ನಿಷೇಧಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + six =
Remember me
