ಬೆಂಗಳೂರು:ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.
ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು.
ಪೊಲೀಸ್​ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ಇಡೀ ನೇಮಕಾತಿಯೇ ರದ್ದಾಗಿತ್ತು. ಮರು ಪರೀಕ್ಷೆ ನಡೆಸಬೇಕೆಂಬ ಸರ್ಕಾರದ ಕೂಗಿಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​ ನೀಡಿತು. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮರು ಪರೀಕ್ಷಾ ದಿನಾಂಕವನ್ನು ನ.22ರಂದು ಪ್ರಕಟಿಸಿ, ಡಿ.23ಕ್ಕೆ ನಿಗದಿ ಮಾಡಿತ್ತು, ಆದರೆ, ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ದಿನಾಂಕ ಮುಂದೂಡಬೇಕೆಂಬ ಕೂಗುಗಳು ಕೇಳಿಬಂದಿದ್ದವು. ಇಂದು ಸದನದಲ್ಲೂ ಇದೇ ಆಗ್ರಹಗಳು ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಜ. 23ಕ್ಕೆ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಮುಂದೂಡಿದ್ದಾರೆ.
ಹೈಕೋರ್ಟ್​ ಆದೇಶವೇನು?ಪಿಎಸ್​ಐ ಮರು ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ನ.10ರಂದು ಆದೇಶ ನೀಡಿತು. ಅಂದಿನ ಬಿಜೆಪಿ ಸರ್ಕಾರ ಮರು ಪರೀಕ್ಷೆಗೆ ಆದೇಶ ನೀಡಿದ್ದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಗಳನ್ನು ಪರಿಶೀಲಿಸಿ, ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತು.
ಏನಿದು ವಿವಾದ?2021ರ ಜನವರಿ 21 ರಂದು ಕರ್ನಾಟಕ ಪೊಲೀಸ್‌ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕಟವಾಗಿತ್ತು. ಅದೇ ವರ್ಷ ಅಕ್ಟೋಬರ್‌ 3 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿಯ ಲಿಖಿತ ಪರೀಕ್ಷೆ ನಡೆಸಲಾಯಿತು. ಆದರೆ ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಭೇಟಿಯಾಗಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಅಭ್ಯರ್ಥಿಗಳು ದೂರು ನೀಡಿದರು. 2022ರ ಜನವರಿ 18ರಂದು 545 ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾದಾಗ ಆಯ್ಕೆ ಪಟ್ಟಿ ತಡೆಗೆ ನೇಮಕಾತಿ ವಿಭಾಗದ ಎಡಿಐಜಿ ಸೂಚನೆ ನೀಡಿದರು. ಈ ಪರೀಕ್ಷೆಯಲ್ಲಿ ದೊಡ್ಡ ಅಕ್ರಮ ನಡೆದಿರುವುದು ಬೆಳಕಿಗೆ ಬಂದು ತನಿಖೆ ನಡೆಸಲಾಗಿತ್ತು. ಅಚ್ಚರಿ ಎಂಬಂತೆ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಬಂಧನವಾಗಿತ್ತು. ಜತೆಗೆ ಅಕ್ರಮಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಈ ಹಗರಣ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು.
ಚಳಿಗಾಲದಲ್ಲಿ ನಿಮ್ಮ ಆಯ್ಕೆ ಬಿಸಿ ನೀರು ಎಂಬುದು ಗೊತ್ತು! ಆದ್ರೆ ಈ ಅನಾನುಕೂಲತೆಗಳ ಬಗ್ಗೆ ತಿಳಿದಿರಲಿ…

ಬೈಕ್​ ಸವಾರನಿಗೆ ಅವಾಚ್ಯ ಪದಗಳಿಂದ ನಿಂದನೆ ಪ್ರಕರಣ: ಭವಾನಿ ವರ್ತನೆ ಬಗ್ಗೆ ಪತಿ, ಪುತ್ರ, ಮಾವ ಏನಂದ್ರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
