ಬೆಂಗಳೂರು: ಬಿಜೆಪಿ ಮಾಡಿದ ತಪ್ಪುಗಳನ್ನು ಮುಂದುವರಿಸಲು ಸಿದ್ಧರಿಲ್ಲ. ಎಲ್ಲ ಮುನ್ನೆಚ್ಚರಿಕೆ ತೆಗೆದುಕೊಂಡೇ ಪಿಎಸ್‌ಐ ಮರು ಪರೀಕ್ಷೆ ನಡೆಸಲು ಸಿದ್ಧರಾಗಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇ ಖುದ್ದು ಪೊಲೀಸ್ ಮಹಾನಿರ್ದೇಶಕರು, ಕೆಇಎ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ನಮ್ಮ ಪೊಲೀಸ್ ಇಲಾಖೆ ಹೊರಗಡೆ ಏನೆಲ್ಲ ನಡೆಯುತ್ತದೆ ಎಂದು ರೆಗ್ಯೂಲೇಟ್ ಮಾಡಲಿದೆ. ಪರೀಕ್ಷೆ ನಡೆಸುವುದು, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದು ಕೆಇಎ ನೋಡಿಕೊಳ್ಳಲಿದೆ. ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡೇ ಪರೀಕ್ಷೆ ನಡೆಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರದ ಅಧಿಕಾರವಧಿಯಲ್ಲಿ ಪಿಎಸ್‌ಐ ಹಗರಣ ಹೇಗೆಲ್ಲ ಆಯಿತು ಎಂಬುದು ನಮಗೆ ಗೊತ್ತಿದೆ. ಮರುಪರೀಕ್ಷೆಯನ್ನು ಸ್ವಾಯತ್ತ ಸಂಸ್ಥೆಗೆ ವಹಿಸುವಂತೆ ಕೋರ್ಟ್ ಆದೇಶಿಸಿದೆ. ಅದರಂತೆ ನಡೆದುಕೊಂಡಿದ್ದೇವೆ. ಪಿಎಸ್‌ಐ ಪರೀಕ್ಷೆಯ ಅಭ್ಯರ್ಥಿಗಳು ಆತಂಕ ಪಡದೆ ಪರೀಕ್ಷೆ ಬರೆಯಿರಿ. ಯಾವುದೇ ಆತಂಕ ಪಡುವುದು ಬೇಡ ಎಂದರು.
ಈ ಪರೀಕ್ಷೆ ಪ್ರಕ್ರಿಯೆ ಮುಗಿದ ಕೂಡಲೇ 400 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತೇವೆ. ಅದಕ್ಕೆ ಸಂಬಂಧಿಸಿದ ಪರೀಕ್ಷೆಯನ್ನು ತಕ್ಷಣವೇ ಮಾಡುತ್ತೇವೆ. ಅದಾದ ಬಳಿಕ ಇನ್ನೂ 600 ಹುದ್ದೆಗಳ ನೇಮಕಕ್ಕೆ ಅನುಮೋದನೆ ಸಿಕ್ಕಿದೆ. ಈ ಬಗ್ಗೆ ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ. ಮುಂದಿನ 6 ತಿಂಗಳ ಒಳಗಾಗಿ 1,500 ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳನ್ನು ನೇಮಕ ಮಾಡುತ್ತೇವೆ. ಇದಕ್ಕೆ ಉದ್ಯೋಗ ಆಕಾಂಕ್ಷಿಗಳು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಿ. ಆತಂಕ ಪಡದೆ ಉತ್ತಮವಾಗಿ ಪರೀಕ್ಷೆ ಬರೆಯಿರಿ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವುದು ನಮ್ಮ ಜವಾಬ್ದಾರಿ ಎಂದು ಡಾ. ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 5 =
Remember me
