| ಗೋವಿಂದರಾಜು ಚಿನ್ನಕುರ್ಚಿ ಬೆಂಗಳೂರು
ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ, 545 ಪಿಎಸ್​ಐ ನೇಮಕಾತಿ ಹಗರಣದಲ್ಲಿ ಆರೋಪಿಗಳಾಗಿದ್ದ 52 ಅಭ್ಯರ್ಥಿಗಳನ್ನು ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕ ವಿಭಾಗ ಮಂಗಳ ವಾರ ಆದೇಶ ಹೊರಡಿಸಿದೆ. ಇದರಿಂದ ಉಳಿದವರಲ್ಲಿ ನೌಕರಿ ಸಿಗುವ ವಿಶ್ವಾಸ ಮೂಡಿದ್ದು, ಹೈಕೋರ್ಟ್​ನತ್ತ ಚಿತ್ತ ಹರಿದಿದೆ. ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಇವರ ವಿರುದ್ಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ನಡೆಸುವ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ನಿಷೇಧಿಸಲಾಗಿದೆ ಎಂದು ನೇಮಕಾತಿ ವಿಭಾಗದ ಡಿಜಿಪಿ ಕಮಲ್ ಪಂತ್ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಬೆಂಗಳೂರು ನಗರ, ಕಲಬುರಗಿ, ಹುಬ್ಬಳ್ಳಿ- ಧಾರವಾಡ ನಗರ, ತುಮಕೂರು ನಗರ ಠಾಣೆ ಗಳಲ್ಲಿ ಎಫ್​ಐಆರ್ ದಾಖಲಾಗಿತ್ತು.
ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1ರಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್, ಇತರೆ ಎಲೆಕ್ಟ್ರಾನಿಕ್ ಸಾಧನ ಬಳಸಿ ಅಕ್ರಮ ಎಸಗಿದ್ದು ಬೆಳಕಿಗೆ ಬಂದಿತ್ತು. ಕೆಲವು ಅಭ್ಯರ್ಥಿಗಳು ಓಎಂಆರ್ ಶೀಟ್​ಗಳನ್ನೇ ತಿದ್ದುಪಡಿ ಮಾಡಿಸಿಕೊಂಡಿರುವುದು ದೃಢವಾಗಿ 52 ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ಈ ವರದಿ ಆಧರಿಸಿ ಏ.6ರಂದು ಆರೋಪಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಇದಕ್ಕೆ ಅಭ್ಯರ್ಥಿಗಳು ಸಮಜಾಯಿಷಿ ನೀಡಿದ್ದಾರೆ. ಇದರ ಮೇರೆಗೆ 1977ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮ-20ರಲ್ಲಿ ಉಲ್ಲೇಖಿಸಿದಂತೆ 52 ಅಭ್ಯರ್ಥಿಗಳು ದುರ್ನಡತೆ ತೋರಿದ್ದಾರೆ. ನಕಲಿ ವ್ಯಕ್ತಿಗಳು, ಸುಳ್ಳು ಹೇಳಿಕೆ, ವಾಸ್ತವ ಮಾಹಿತಿ ಮರೆಮಾಚಿರುತ್ತಾರೆ. ನೇಮಕಾತಿ ಸಮಿತಿ ನೀಡಿರುವ ಸೂಚನೆಗಳನ್ನು ಪರೀಕ್ಷಾ ಕೊಠಡಿಯಲ್ಲಿ ಉಲ್ಲಂಘಿಸಿ ನಕಲು ಮಾಡಿರುವುದನ್ನು ದುರ್ನಡತೆ ಎಂದು ನಿರ್ಧರಿಸಲಾಗಿದೆ ಎಂದು ನೇಮಕಾತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಕೆಲಸಕ್ಕೂ ಕುತ್ತು:ಡಿಬಾರ್ ಆಗಿರುವ 52 ಅಭ್ಯರ್ಥಿಗಳಲ್ಲಿ 10 ಕಾನ್​ಸ್ಟೆಬಲ್​ಗಳು ಇದ್ದಾರೆ. ಇದೀಗ ಅವರ ಪೊಲೀಸ್ ಸೇವೆಗೂ ಕುತ್ತು ಬಂದಿದೆ. ಅಲ್ಲದೆ, 402 ಎಸ್​ಐ ಹುದ್ದೆಗಳ ನೇಮಕಾತಿಗೂ ಇವರು ಅರ್ಜಿ ಸಲ್ಲಿಸಿದ್ದರು. ದೈಹಿಕ ಪರೀಕ್ಷೆ ಮುಗಿದಿದ್ದು, ಲಿಖಿತ ಪರೀಕ್ಷೆ ಬಾಕಿ ಉಳಿದಿದೆ. ಇದರಿಂದಲೂ ಅವರನ್ನು ಹೊರಹಾಕಲಾಗಿದೆ.
ಎಸ್. ಜಾಗೃತ್, ಬಿ. ಗಜೇಂದ್ರ, ಸೋಮನಾಥ ಮಲ್ಲಿಕಾರ್ಜುನಯ್ಯ ಹಿರೇಮಠ, ಎಚ್.ಯು. ರಘುವೀರ್, ಎಂ.ಸಿ. ಚೇತನ್​ಕುಮಾರ್, ಬಿ.ಸಿ. ವೆಂಕಟೇಶ್ ಗೌಡ, ಎ.ಪಿ. ಮನೋಜ್, ಜಿ.ಆರ್. ಮಂಜುನಾಥ್, ಪಿ. ಸಿದ್ದಲಿಂಗಪ್ಪ, ಎಸ್.ಮಮತೇಶ್ ಗೌಡ, ಎಚ್. ಯಶವಂತ್​ಗೌಡ, ಸಿ.ಎಂ. ನಾರಾಯಣ, ಸಿ.ಎಸ್. ನಾಗೇಶ್ ಗೌಡ, ಆರ್. ಮಧು, ಸಿ. ಯಶವಂತ ದೀಪ್, ಸಿ.ಕೆ. ದಿಲೀಪ್​ಕುಮಾರ್, ರಚನ ಹಣಮಂತ್, ಜಿ. ಶಿವರಾಜ್, ಸಿ. ಪ್ರವೀಣ್​ಕುಮಾರ್, ಕೆ. ಸೂರ್ಯನಾರಾಯಣ, ಸಿ.ಎಂ. ನಾಗರಾಜ್, ಜಿ.ಸಿ. ರಾಘವೇಂದ್ರ, ಬೀರಪ್ಪ ಮೇತಿ, ಎಚ್. ಮೋಹನ್​ಕುಮಾರ್, ಎನ್. ದಿಲೀಪ್​ಕುಮಾರ್, ದರ್ಶನ್​ಗೌಡ, ಲಕ್ಕಪ್ಪ ರಾವುತಪ್ಪ, ಎಚ್.ಬಿ. ಹರೀಶ್, ಜೆ. ಕುಶಾಲ್​ಕುಮಾರ್, ವೀರೇಶ್, ಎನ್. ಚೇತನ್, ಕೆ. ಪ್ರವೀಣ್​ಕುಮಾರ್, ಅರುಣ್​ಕುಮಾರ್, ವಿಶಾಲ್, ಎಚ್.ವಿ. ಸುನೀಲ್, ಎಚ್.ಎನ್. ದೇಸಾಯಿ, ಶ್ರೀಧರ್, ಶಾಂತಿಬಾಯಿ, ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ, ಸುಪ್ರೀಯ ಹುಂಡೆಕರ್, ಪ್ರಭು ಇಟ್ಟಗರ್, ವಿಜಯಕುಮಾರ್ ಪೂಜಾರಿ, ಇಸ್ಮಾಲ್ ಖಾದಿರ್, ಯಶವಂತ ಮಾನೆ, ಎಸ್. ಶರಣಪ್ಪ ಪಾಟೀಲ್, ಬಿ. ಜೋಗೂರ್, ಸೋಮನಾಥ್, ಶ್ರೀಮಂತ ಸತ್ತಾಪುರ್, ರವಿರಾಜ್, ಪೀರಪ್ಪ ಮತ್ತು ಶ್ರೀಶೈಲಾ.
30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರೂ ಆದ್ರೆ ನೀವೇ ಜವಾಬ್ದಾರಿ: ಎಸ್​ಪಿಗೆ ಡಿವೈಎಸ್​ಪಿ ಪತ್ರ

ಮಹಿಳೆಯರಿಗೆ ಶಕ್ತಿ, ಮಕ್ಕಳಿಗೆ ನಿಶ್ಶಕ್ತಿ?: ವಾರಕ್ಕೆ 2 ದಿನ ನೀಡುತ್ತಿದ್ದ ಮೊಟ್ಟೆ-ಬಾಳೆಹಣ್ಣು ಇನ್ನು ಒಂದೇ ದಿನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 12 =
Remember me
