ಬೆಂಗಳೂರು:ಮಾಧ್ಯಮಗಳು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಪ್ರಭಾವಿ ಸಚಿವರ ಪಾತ್ರ ಇದೆ ಎಂದು ಬಿಚ್ಚಿಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡಿದ್ದು, ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ್ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಈ ಪ್ರಕರಣದ ವಿಚಾರವಾಗಿ ನನ್ನ ವಿರುದ್ಧ ದಾಖಲೆ ಇದ್ದರೆ ಶಿವಕುಮಾರ್ ಅವರು ಪ್ರಕಟಿಸಲಿ ಎಂದು ಸಚಿವ ಅಶ್ವಥ್ ನಾರಾಯಣ್ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಅವರು ದೊಡ್ಡವರು, ದೊಡ್ಡವರಾಗಬೇಕು ಎಂದುಕೊಂಡಿರುವವರು, ಅವರ ವಿಚಾರವನ್ನು ನಾನು ಬಿಚ್ಚಿಡಲಿಲ್ಲ. ಮಾಧ್ಯಮಗಳು ಮಾಗಡಿಯ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಹೇಳಿದಾಗ ಸಂತೋಷವಾಗಿತ್ತು. ಆನಂತರ ನಮ್ಮ ಪಕ್ಷದಲ್ಲಿದ್ದ ಕಾರ್ಯಕರ್ತರ ಕುಟುಂಬದವರು ಆಗಿದ್ದಾರೆ ಎಂದು ಹೇಳಿದ್ದು ಕೇಳಿ ಖುಷಿ ಆಯ್ತು. ಪರಿಸ್ಥಿತಿ ಹೀಗಿರುವಾಗ ಅನುಮಾನಗಳೆಲ್ಲವೂ ತಮ್ಮ ವಿರುದ್ಧವೇ ತಿರುಗುತ್ತಿದೆ ಎಂದು ಸಚಿವರು ಯಾಕೆ ಭಾವಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಅಧಿಕಾರದ ದರ್ಪ ಹಾಗೂ ಭ್ರಷ್ಟಾಚಾರ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿದೆ ಎಂಬ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಹೆಣದಲ್ಲಿ ಹಣ ಸಹಾಯಕ ಪ್ರಾಧ್ಯಾಪಕ ಹುದ್ದೆ ಅಕ್ರಮ ಇವುಗಳನ್ನೆಲ್ಲಾ ನಾನು ಮಾಡಿದ್ದೀನಾ? ಈಗ ಸಾಲು ಸಾಲು ಹಗರಣಗಳು ಬೆಳಕಿಗೆ ಬಂದವಲ್ಲಾ? ಅದನ್ನು ನಾವು ಮಾಡಿದ್ದೇವಾ? ನಮ್ಮ ಸರ್ಕಾರದಲ್ಲಿ ಈ ರೀತಿ ಆಗಿದೆಯಾ ಎಂದರು.
ನಾವು ಕೇಳುತ್ತಿರುವುದು ಪಿಎಸ್ಐ ಅಕ್ರಮದ ಬಗ್ಗೆ ತನಿಖೆ ಮಾಡಿ, ನಂತರ ತೀರ್ಮಾನಿಸಿ ಎಂದು. ದರ್ಶನ್ ಗೌಡಗೆ ನೊಟೀಸ್ ಜಾರಿ ಮಾಡಿದ್ದೀರಿ. ಅವನ ವಿಚಾರಣೆ ಮಾಡಿದ ವರದಿ ಬಂದಿಲ್ಲ. ಆತ ಏಕಾಏಕಿ ಬಿಡುಗಡೆಯಾದ ಎಂದರೆ ಆತ ನಿರ್ದೋಷಿ ಎಂದು ಸಾಬೀತಾಯ್ತಾ? ಅವನ ವಿರುದ್ಧ ಯಾವ ರೀತಿ ತನಿಖೆ ನಡೆದಿದೆ? ಆತ ವಿಚಾರಣೆ ಮುಕ್ತನಾಗಲು ಯಾರು ಕಾರಣ? ಇದರ ಹಿನ್ನೆಲೆ ಏನು?ಯಾರು? ಮಾಧ್ಯಮಗಳು ನಿಮಗೆ ಬರುವ ಮಾಹಿತಿ ಎಲ್ಲಿಂದ ಬಂದಿದೆ ಎಂದು ಮೂಲದ ಬಗ್ಗೆ ಹೇಳುತ್ತೀರಾ? ನಾವು ನಮಗೆ ಯಾರು ಕರೆ ಮಾಡಿ ಹೇಳಿದ್ದಾರೆ ಎಂದು ಹೇಳಲು ಸಾಧ್ಯವೇ? ಸಮಯ ಬಂದಾಗ ಅದನ್ನೂ ಮಾಡುತ್ತೇವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
