ಬೆಂಗಳೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆಸುವಂತೆ ಆದೇಶ ಮಾಡಿರುವ ರಾಜ್ಯ ಸರ್ಕಾರ ಇದೀಗ ವಿವಾದಕ್ಕೆ ಒಳಗಾಗುವ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿವೆ. ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದುಕೊಂಡು ಬನ್ನಿ ಎಂದು ಮಾಡಿರುವ ಆದೇಶಕ್ಕೆ ಹಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ.11ರಂದು ಪ್ರಧಾನ ಮಂತ್ರಿಯವರು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುವ ಪ್ರಯುಕ್ತ ವಿದ್ಯಾರ್ಥಿಗಳನ್ನು ಕರೆತರುವಂತೆ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ನ. 2ರಂದು ನಡೆದ ಪ್ರಾಂಶುಪಾಲರ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕು ಎಂದು ಹೇಳಲಾಗಿದೆ. ಇಂಥ ಕಾಲೇಜಿನಿಂದ ಇಷ್ಟೇ ವಿದ್ಯಾರ್ಥಿಗಳನ್ನೂ ಕರೆ ತರಬೇಕು ಎಂದು ಪಟ್ಟಿಯನ್ನೂ ನೀಡಲಾಗಿದೆ.
ಆಯಾ ಕಾಲೇಜುಗಳಿಗೆ ನೇಮಕ ಮಾಡಿರುವ ಬಸ್​ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾಲೇಜಿನಿಂದ ಹೊರಡುವ ಬಸ್​​ನಲ್ಲಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರೆತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗು-ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ ಎಂದೂ ಎಚ್ಚರಿಕೆ ನೀಡಿ ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಅಪಾರ್ಟ್​ಮೆಂಟ್ ಹತ್ತನೇ ಮಹಡಿಯಿಂದ ಹಾರಿದ ವಿದ್ಯಾರ್ಥಿ; ತಪ್ಪು ಮಾಡಿ ಸಿಕ್ಕಿಬಿದ್ದ ಮುಜುಗರ ಎದುರಿಸಲಾಗದೆ ಸಾವಿಗೆ ಶರಣು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 1 =
Remember me
