ಬೆಂಗಳೂರು:ರಾಜ್ಯಾದ್ಯಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಗುರುವಾರದಿಂದ ಪ್ರಾರಂಭಗೊಂಡಿದ್ದು, ಮೊದಲ ದಿನ 314 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 19 ಮಂದಿ ಗೈರು ಹಾಜರಾಗಿದ್ದಾರೆ. ಗುರುವಾರ ಗಣಿತ, ಐಚ್ಛಿಕ ಕನ್ನಡ ಮತ್ತು ಮೂಲ ಗಣಿತ ವಿಷಯಗಳಿಗೆ 58 ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆದಿದೆ. ಮೂರೂ ವಿಷಯಗಳಿಂದ ಒಟ್ಟು 333 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಮೊದಲ ದಿನ ಪರೀಕ್ಷೆ ಬರೆದವರಲ್ಲಿ ಬಹುತೇಕ ಪುನರಾವರ್ತಿತ ಹಾಗೂ ಫಲಿತಾಂಶ ರದ್ದುಪಡಿಸಿಕೊಂಡಿದ್ದ ವಿದ್ಯಾರ್ಥಿಗಳೇ ಆಗಿರುತ್ತಾರೆ ಎಂದು ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಾರಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ 18 ಸಾವಿರಕ್ಕೂ ಹೆಚ್ಚು ಖಾಸಗಿ ಅಭ್ಯರ್ಥಿಗಳಲ್ಲಿ ಬಹುತೇಕ ಮಂದಿ ಕಲಾ ವಿಭಾಗದಿಂದ ಪರೀಕ್ಷೆ ಬರೆಯಲಿದ್ದಾರೆ. ಆ ವಿಭಾಗದ ವಿಷಯಗಳ ಪರೀಕ್ಷಾ ದಿನಗಳಲ್ಲಿ ಎಲ್ಲ 187 ಕೇಂದ್ರಗಳಲ್ಲೂ ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳ ಸಂಖ್ಯೆ ಹೆಚ್ಚಾಗಲಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಷಯಗಳ ಪರೀಕ್ಷೆಗಳ ದಿನ ಕೇವಲ ಪುನರಾವರ್ತಿತ ಹಾಗೂ ಫಲಿತಾಂಶ ರದ್ದುಪಡಿಸಿಕೊಂಡಿವರು ಮಾತ್ರ ಹಾಜರಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವರ ಪರಿಶೀಲನೆ:ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಅಲ್ಲಿನ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಆಬಳಿಕ ಮಾತನಾಡಿದ ಸಚಿವರು, 1ರಿಂದ 8ನೇ ತರಗತಿ ಹಂತ ಹಂತವಾಗಿ ಆರಂಭವಾದ ನಂತರ ಬರುವ ಪ್ರಕ್ರಿಯೆ ಆಧರಿಸಿ ಪ್ರಾಥಮಿಕ ಶಾಲೆ ಆರಂಭಿಸುತ್ತೇವೆ. ಪಾಲಕರಿಂದಲೂ ಅಭಿಪ್ರಾಯ ಸಂಗ್ರಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಇಬ್ಬರೇ ಹಾಜರು:ಚಿತ್ರದುರ್ಗ ಜಿಲ್ಲೆಯಲ್ಲಿ ಗುರುತಿಸಿರುವ ಆರು ಕೇಂದ್ರಗಳ ಪೈಕಿ, ಎರಡರಲ್ಲಿ ಮಾತ್ರ ಗಣಿತದ ಪರೀಕ್ಷೆ ನಡೆದಿದೆ. ಈ ಎರಡರಲ್ಲೂ ತಲಾ ಒಬ್ಬೊಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದಾರೆ.
ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಿಲ್ಲ. ವಿದ್ಯಾರ್ಥಿಗಳ ಅರ್ಹತೆ ಮೇಲೆ ಅಂಕ ನೀಡುತ್ತೇವೆ. ಈ ಬಗ್ಗೆ ಗೊಂದಲ ಬೇಡ.
|ಬಿ.ಸಿ.ನಾಗೇಶ್ಶಿಕ್ಷಣ ಸಚಿವ
ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​, ಏಷ್ಯಾ ಬುಕ್​ ಆಫ್​ ರೆಕಾರ್ಡ್ಸ್​ ಎರಡರಲ್ಲೂ ದಾಖಲೆ ಬರೆದಳು ಕರ್ನಾಟಕದ ಈ ಹುಡುಗಿ, ಅಮನ!

ಒಂದು ವರ್ಷದ ಆ ಮಗುವನ್ನು ಒಂದು ದಿನ ಭೇಟಿ ಮಾಡುವೆ ಅಂದ್ರು ನಟಿ ರಶ್ಮಿಕಾ; ಅದಕ್ಕೆ ಕಾರಣ ಕೂಡ ‘ರಶ್ಮಿಕಾ’ನೇ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 2 =
Remember me
