ಹಾನಗಲ್ಲ: ಕಾಲೇಜ್​ನಲ್ಲಿ ಪ್ರಾಚಾರ್ಯರು ನಿಂದಿಸಿ, ಅವಮಾನ ಮಾಡಿದ್ದಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಡೊಳ್ಳೆಶ್ವರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಪಟ್ಟಣದ ಎನ್​ಸಿಜೆಸಿ ಕಾಲೇಜ್​ನ ಆದಿತ್ಯ ರಘುವೀರ ಚವ್ಹಾಣ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಆದಿತ್ಯ ತಾಲೂಕಿನ ಡೊಳ್ಳೇಶ್ವರದ ಅಜ್ಜಿಯ ಮನೆಯಲ್ಲಿದ್ದುಕೊಂಡು ಹಾನಗಲ್ಲಿನ ಎನ್​ಸಿಜೆಸಿ ಕಾಲೇಜ್​ನಲ್ಲಿ ಪಿಯುಸಿ ಕಾಮರ್ಸ್ ವಿಭಾಗದ ಮೊದಲ ವರ್ಷದಲ್ಲಿ ಕಲಿಯುತ್ತಿದ್ದ. ಈತ ಕೆಲವು ದಿನಗಳಿಂದ ಸರಿಯಾಗಿ ಕಾಲೇಜ್​ಗೆ ಹಾಜರಾಗುತ್ತಿರಲಿಲ್ಲ ಎಂದು ಅವರ ತಂದೆ ರಘುವೀರ ಚವ್ಹಾಣ ಅವರನ್ನು ಕರೆಯಿಸಿ ಪ್ರಾಚಾರ್ಯರು ಬೈದು ಬುದ್ದಿ ಹೇಳಿದ್ದರು. ಈ ಘಟನೆಯ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಡೊಳ್ಳೇಶ್ವರದ ಬಾಬಣ್ಣ ಆರೇರ ಎಂಬುವರ ತೋಟದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು.
ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದ ವಿದ್ಯಾರ್ಥಿ ಆದಿತ್ಯನನ್ನು ಹುಬ್ಬಳ್ಳಿ ಕಿಮ್್ಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಬ್ಬಳ್ಳಿಗೆ ತೆರಳುವ ಮಾರ್ಗಮಧ್ಯೆ ಗಾಯಾಳು ಆದಿತ್ಯ, ಪ್ರಾಚಾರ್ಯರ ಮೇಲೆ ಆರೋಪ ಮಾಡಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಾಚಾರ್ಯರು ನನ್ನನ್ನು ಪಾಲಕರು, ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅವಮಾನಗೊಳಿಸಿದರು ಎಂಬ ಕಾರಣಕ್ಕೆ ಮನನೊಂದು ಆದಿತ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಬುಧವಾರ ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 17 =
Remember me
