ಹೊನ್ನಾಳಿ:ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸದೆ ಮೋಸ ಮಾಡಲಾಗುತ್ತಿದೆ ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಳ್ಳಿ ಹಳ್ಳಿಗೆ ತೆರಳಿ ಸರ್ಕಾರದ ವಿರುದ್ಧ ಜನ ಜಾಗೃತಿ ಮೂಡಿಸುತ್ತಿದ್ದಾರೆ.
ತಾಲೂಕಿನ ಚಿಕ್ಕೇರಹಳ್ಳಿ, ದೊಡ್ಡೇರಹಳ್ಳಿ ಸೇರಿ ಇತರ ಗ್ರಾಮಗಳಗೆ ಸೋಮವಾರ ಭೇಟಿ ನೀಡಿದ್ದ ರೇಣುಕಾಚಾರ್ಯ, ಹೊನ್ನಾಳಿ- ನ್ಯಾಮತಿ ತಾಲೂಕಿನ ಎಲ್ಲ ಹಳ್ಳಿಗಳಿಗೆ ತೆರಳಿ ಈ ಕುರಿತು ಮನವರಿಕೆ ಮಾಡಿಕೊಡುತ್ತೇನೆ ಎಂದು ತಿಳಿಸಿದರು.ಅವಳಿ ತಾಲೂಕಿನ ಜನರಾರೂ ವಿದ್ಯುತ್ ಬಿಲ್ ಪಾವತಿಸಬೇಡಿ. ಯಾರಾದರೂ ಬಿಲ್ ಕೇಳಿದರೆ ನನಗೆ ಕರೆ ಮಾಡಿ ಎಂದರು. ಉಚಿತ ಭರವಸೆ ಈಡೇರಿಸುವವರೆಗೂ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಇದನ್ನೂ ಓದಿ:ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ ಮಕ್ಕಳಿಗೆ ಹೊಸ ಪುಸ್ತಕ ಕೊಡಿ: ಸಿಎಂಗೆ ಸಮಾನ ಮನಸ್ಕರ ಒಕ್ಕೂಟದ ಮನವಿ
ಘೋಷಿತ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಬದಲು ಈಗ ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಷರತ್ತುಗಳು ಅನ್ವಯ ಎಂದು ವರಸೆ ಬದಲಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸರ್ಕಾರದ ನಡೆ ಗಮನಿಸಿದರೆ ಇವುಗಳ ಜಾರಿ ಅನುಮಾನ ಎನಿಸುತ್ತದೆ ಎಂದರು.
ಅಧಿಕಾರಕ್ಕೆ ಬಂದ ಬಳಿಕ ಮತದಾರರನ್ನು ಅವಮಾನಿಸಿದರೆ ಅವರು ಕ್ಷಮಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆಗಳನ್ನು ಕಾರ್ಯರೂಪಕ್ಕೆ ತರದಿದ್ದರೆ ಜನರನ್ನು ಸಂಘಟಿಸಿ ಹೋರಾಟಕ್ಕಿಳಿಯುವೆ ಎಂದು ತಿಳಿಸಿದರು.
ಒಂಟಿಯಾಗಿದ್ದ, 3 ಮಕ್ಕಳ ವೃದ್ಧತಾಯಿ ಕೋಣೆಯಲ್ಲಿ ಶವವಾಗಿ ಪತ್ತೆ!; ಪ್ರಕರಣ ಸಂಬಂಧ 5 ತಂಡಗಳ ರಚನೆ

ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 + eleven =
Remember me
