ವಿಜಯನಗರ:ರಾಜ್ಯಾದ್ಯಂತ ಕರೊನಾ ಪ್ರಕರಣ ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, ಎಲ್ಲವೂ ನಿಧಾನವಾಗಿ ಸಹಜಸ್ಥಿತಿಗೆ ಬರುತ್ತಿದೆ ಎಂದು ಸಾರ್ವಜನಿಕರು ನಿರಾಳರಾಗುತ್ತಿದ್ದಾರೆ. ಆದರೆ ಈ ನಡುವೆ ಕೊಟ್ಟೂರೇಶ್ವರ ಭಕ್ತಾದಿಗಳಿಗೆ ಬೇಸರ ಮೂಡಿಸುವ ಸಂಗತಿಯೊಂದು ಹೊರಬಿದ್ದಿದೆ.
ವಿಜಯನಗರ ಜಿಲ್ಲೆಯ ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವದಲ್ಲಿ ಪ್ರತಿವರ್ಷ ಲಕ್ಷಾಂತರ ಜನ ಪಾಲ್ಗೊಳ್ಳುವ ಮೂಲಕ ಅದ್ಧೂರಿಯಾಗಿ ನಡೆಯುತ್ತದೆ. ಊರ-ಪರವೂರಿನ ಮಾತ್ರವಲ್ಲದೆ ನೆರೆರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಈ ಸಲ ಕರೊನಾ ಸೋಂಕು ಹಬ್ಬುವ ಭೀತಿಯಿಂದ ಈ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಫೆ‌.23ರಿಂದ ಫೆ.26ರವರೆಗೆ ಈ ಸಲ ಕೊಟ್ಟೂರೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ಪ್ರತಿವರ್ಷ ಇದರಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ಇಷ್ಟೊಂದು ಭಕ್ತರು ಆಗಮಿಸುವಾಗ ಕೋವಿಡ್ ಮಾರ್ಗಸೂಚಿ ಪಾಲನೆ ಕಷ್ಟ. ಇದರಿಂದ ಸೋಂಕು ಮತ್ತೆ ವ್ಯಾಪಿಸುವ ಸಾಧ್ಯತೆ ಅಧಿಕವಾಗಿರುತ್ತದೆ. ಹೀಗಾಗಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಬಾರದು ಎಂದು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್​ ಪಿ. ಶ್ರವಣ್ ಆದೇಶ ಹೊರಡಿಸಿದ್ದಾರೆ.
ಪಕ್ಕದ ಮನೆಯವಳನ್ನು ಮಚ್ಚಿನಿಂದ ಹೊಡೆದು ಕೊಂದ; ಇನ್ನೊಬ್ಬಾಕೆಯ ಸ್ಥಿತಿ ಚಿಂತಾಜನಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 13 =
Remember me
