ಬೆಂಗಳೂರು:ಇದೇ ಮೊಟ್ಟಮೊದಲ ಬಾರಿಗೆ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಮಾಡಲಾಗುತ್ತಿದ್ದು ಇಂದಿನಿಂದ ಶುರುವಾಗಲಿದೆ. ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದು, ಎಲ್ಲ ಶಾಲೆಗಳಿಗೂ ರವಾನಿಸಲಿದೆ. ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿದೆ.
5ನೇ ಮತ್ತು 8ನೇ ತರಗತಿಯ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕೋರ್ಟ್ ಅಂಗಳದಲ್ಲಿ ಇದ್ದರೂ ಪರೀಕ್ಷೆಗೆ ಶಿಕ್ಷಣ ಇಲಾಖೆ ತಯಾರಿ ಮಾಡಿದೆ. ಸುಪ್ರೀಂ ಕೋರ್ಟ್​ನಲ್ಲಿ ಇವತ್ತು ಬೋರ್ಡ್ ಎಕ್ಸಾಂ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದ್ದು ಈ ಮಧ್ಯೆ ಮಕ್ಕಳಿಗೆ ಎಕ್ಸಾಂ ಕೂಡ ಮೂಹೂರ್ತ ಫಿಕ್ಸ್ ಆಗಿದೆ.
ರಾಜ್ಯದ ಎಲ್ಲಾ ರಾಜ್ಯ ಪಠ್ಯ ಕ್ರಮ ಅನುಸರಿಸುವ ಶಾಲೆಗಳಲ್ಲಿ ಇವತ್ತು ಪರೀಕ್ಷೆ ನಡೆಯಲಿದೆ. ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೋರ್ಡ್ ಪರೀಕ್ಷೆ ನಡೆಸುತ್ತಿದೆ. ಆಯಾ ಶಾಲೆಗಳೇ ಪರೀಕ್ಷಾ ಕೇಂದ್ರಗಳಾಗಿದ್ದು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗಿದ್ದಾರೆ.
ಪ್ರತಿ ವಿಷಯದ ಪರೀಕ್ಷೆ 40 ಅಂಕಗಳಿಗೆ ಇರಲಿದೆ. ಐದನೇ ತರಗತಿ ಮಕ್ಕಳಿಗೆ ಇಂದಿನಿಂದ ಮಾರ್ಚ್ 30ರ ವರೆಗೆ ಪರೀಕ್ಷೆಯಾದರೆ, 8ನೇ ತರಗತಿ ಮಕ್ಕಳಿಗೆ ಇಂದಿನಿಂದ ಏಪ್ರಿಲ್ ಒಂದರವರೆಗೆ ಪರೀಕ್ಷೆ ನಡೆಯಲಿದೆ.
5, 8 ನೇ ತರಗತಿಗೆ (ಮಾ.27) ಇಂದಿನಿಂದ ಏಪ್ರಿಲ್ 01 ರವರೆಗೆ ಮೌಲ್ಯಾಂಕನ ನಡೆಯಲಿದ್ದು 5 ಮತ್ತು 8 ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು.
5 ಮತ್ತು 8 ನೇ ತರಗತಿಯ ಮೌಲ್ಯಾಂಕನನ್ನು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಇದು ಕೇವಲ ಮೌಲ್ಯಾಂಕನದಾಗಿದೆ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿ ತಿಳಿದುಕೊಂಡು ಮುಂದಿನ ಪಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಈಕ್ಷಣಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ. ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಈ ಮೂಲಕ ಫಲಿತಾಂಶದ ಗೌಡತೆಯನ್ನು ಕಾಪಾಡಲಾಗುವುದು. ಪಠ್ಯ ಪುಸ್ತಕವನ್ನಾಧರಿಸಿ ಮೌಲ್ಯಾಂಕನಕ್ಕೆ ಪ್ರಶ್ನೆ ಸಿದ್ಧಪಡಿಸಲಾಗಿದೆ.
27-03-2023 – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು28-03-2023ರ ದ್ವಿತೀಯ ಭಾಷೆ – ಕನ್ನಡ, ಇಂಗ್ಲೀಷ್29-03-2023ರ- ಕೋರ್ ವಿಷಯ- ಪರಿಸರ ಅಧ್ಯಯನ30-03-2023ರ ಕೋರ್ ವಿಷಯ, ಗಣಿತ
27-03-2023ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಇಂಗ್ಲೀಷ್ ( NCERT), ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ28-03-2023ರ ಮಂಗಳವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ29-03-2023ರ ಬುಧವಾರ – ತೃತೀಯ ಭಾಷೆ – ಹಿಂದಿ, ಹಿಂದಿ ( NCERT), ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು30-03-2023ರ ಗುರುವಾರ – ಕೋರ್ ವಿಷಯ – ಗಣಿತ31-03-2023ರ ಶುಕ್ರವಾರ – ಕೋರ್ ವಿಷಯ – ವಿಜ್ಞಾನ.01-04-2023ರ ಶನಿವಾರ – ಕೋರ್ ವಿಷಯ – ಸಮಾಜ ವಿಜ್ಞಾನ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 7 =
Remember me
