ಬಳ್ಳಾರಿ:ಸ್ವಲ್ಪವೇ ಹೆಚ್ಚೂಕಡಿಮೆ ಆಗಿದ್ದರೂ ಇತ್ತೀಚೆಗೆ ಮೈಸೂರಿನಲ್ಲಿ ನಡೆದಂಥದ್ದೇ ಘಟನೆ ಜರುಗಿ ಹೋಗಿರುತ್ತಿತ್ತು. ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್ ಸವಾರನೊಬ್ಬ ಬಿದ್ದಿದ್ದು, ಆತನಿಗೂ ಹಾಗೂ ಆತನ ತಾಯಿಗೆ ಗಾಯಗಳಾಗಿವೆ. ಪರಿಣಾಮ ಸ್ಥಳದಲ್ಲಿ ಜಮಾಯಿಸಿದ ಜನರು ಉದ್ರಿಕ್ತರಾಗಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದರು.
ಬಳ್ಳಾರಿಯ ಸಂಗಮ್ ಸರ್ಕಲ್​ನಲ್ಲಿ ಈ ಘಟನೆ ಸಂಭವಿಸಿದೆ. ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ ಎಂಬ ಭಯಕ್ಕೆ ಬೈಕ್ ಸವಾರ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಬಿದ್ದಿದ್ದು, ಆತನ ಜತೆಗೆ ತಾಯಿಗೂ ಗಾಯಗಳಾಗಿವೆ.
ಇದನ್ನೂ ಓದಿ:ರೊಚ್ಚಿಗೆದ್ದು ಪೊಲೀಸರನ್ನೇ ಥಳಿಸಿದ ಸಾರ್ವಜನಿಕರು; ಅಡ್ಡಗಟ್ಟಿದ ಸಂಚಾರ ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಬಿದ್ದ ಬೈಕ್ ಸವಾರ ಸಾವು
ಬಿದ್ದ ಯುವಕ ಹಾಗೂ ತಾಯಿಯನ್ನು ಉಪಚರಿಸಿದ ಸ್ಥಳೀಯರು ಪೊಲೀಸರ ವಿರುದ್ಧ ವಾಗ್ವಾದಕ್ಕೆ ಇಳಿದಿದ್ದರಿಂದ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಯಿತು. ಈ ಸಂದರ್ಭದಲ್ಲ ಜಮಾಯಿಸಿದ್ದ ಸ್ಥಳೀಯರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದರು. ತಕ್ಷಣವೇ ಹೆಚ್ಚಿನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ನಂತರ ಸಾರ್ವಜನಿಕರನ್ನು ಸಮಾಧಾನ ಪಡಿಸಿ, ಗುಂಪುಗೂಡಿದ್ದ ಜನರನ್ನು ಚದುರಿಸಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.
ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​

25 ಕಾರ್ಮಿಕರು ಪ್ರಯಾಣಿಸುತ್ತಿದ್ದ ಟೆಂಪೊ ಪಲ್ಟಿ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಅಪಘಾತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 13 =
Remember me
