ಬೆಂಗಳೂರು:ಇಂದು ಬೆಳಗ್ಗೆ ರಾಜ್ಯಾದ್ಯಂತ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಆರಂಭವಾಯಿತು. ಪರೀಕ್ಷೆ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪುಗುಂಪಾಗಿ ನಿಂತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು.
ಪರೀಕ್ಷೆ ಬರೆಯುವ ಧಾವಂತದಲ್ಲಿ ದೈಹಿಕ ಅಂತರ ಮರೆತ ವಿದ್ಯಾರ್ಥಿಗಳು ಕರೊನಾ ಭೀತಿಯನ್ನು ಲೆಕ್ಕಿಸಲಿಲ್ಲ. ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್​ಗೆ ಒಳಪಡಿಸಿದ ಬಳಿಕ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ಮಾಡಲಾಯಿತು.ಇದನ್ನೂ ಓದಿರಿವಿಶ್ವನಾಥ್​ಗೆ ಟಿಕೆಟ್ ಕೈತಪ್ಪಿರುವ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ…
ಬೆ.10.15ರಿಂದ 1.30ರವರೆಗೆ ಇರುವ ಪರೀಕ್ಷೆಗೆ ನಿಗದಿತ ಸಮಯಕ್ಕೂ ಮೊದಲೇ ಬಹುತೇಕ ವಿದ್ಯಾಥಿರ್ಗಳು ಪರೀಕ್ಷಾ ಕೇಂದ್ರದ ಬಳಿ ಹಾಜರಿದ್ದರು. ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,95,997 ವಿದ್ಯಾರ್ಥಿಗಳಿಗೆ 1,016 ಕೇಂದ್ರದಲ್ಲಿ ಪರೀಕ್ಷೆ ನಡೆಯಿತು. ಕೆಲವೆಡೆ ಗೊಂದಲದ ನಡುವೆಯೂ ವಿದ್ಯಾರ್ಥಿಗಳು ಪರೀಕ್ಷೆಗೆ ಕಳಿತರು. ಮಾಸ್ಕ್​ ಧರಿಸಿ ಪರೀಕ್ಷೆ ಬರೆಯುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು.
ಗದಗ ನಗರದ ಜೆಟಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪ್ರೆಚರ್ ಕಂಡುಬಂದಿದ್ದರಿಂದ ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಪರೀಕ್ಷೆಗೆ ಕೂರಿಸಲಾಯಿತು.
ಮಾರ್ಚ್​ನಲ್ಲೇ ಮುಗಿಯಬೇಕಿದ್ದ ಇಂಗ್ಲಿಷ್​ ಪರೀಕ್ಷೆಯನ್ನು ಕರನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಬಹುನಿರೀಕ್ಷಿತ ಪರೀಕ್ಷೆಗೆ ಇಂದು ಕಾಲಕೂಡಿಬಂತು.
ಇದನ್ನೂ ಓದಿರಿಬಿಜೆಪಿ ಕಚೇರಿಯಲ್ಲಿ ಆರ್.ಶಂಕರ್​ ಗಳಗಳನೇ ಅತ್ತಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − two =
Remember me
