ಬೆಂಗಳೂರು:ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪರಿಷ್ಕರಣೆಗೊಂಡಿದೆ. ಈ ಮೊದಲು ಏಪ್ರಿಲ್ 16ರಿಂದ ಮೇ 6ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆಇಇ ನೀಟ್ ಪರೀಕ್ಷೆಯ ಮೊದಲ ಹಂತದ ಪರೀಕ್ಷೆ ಮತ್ತು ಪಿಯು ಪರೀಕ್ಷೆ ದಿನಾಂಕ ಒಂದೇ ಆಗಿದ್ದರಿಂದ ವೇಳಾಪಟ್ಟಿ ಬದಲು ಮಾಡಿದೆ.
ಜೆಇಇ ಪರೀಕ್ಷೆಯು ಏ.16ರಿಂದ 21ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಆ ಪ್ರಕಾರವಾಗಿ ಏ.22ರಿಂದ ಮೇ 11ರವರೆಗೆ ನಡೆಸಲು ನಿರ್ಧರಿಸಿದೆ. ಈ ವೇಳಾಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.
ವಿದ್ಯಾರ್ಥಿಗಳು, ಪಾಲಕರು ಆಕ್ಷೇಪಣೆಗಳಿದ್ದಲ್ಲಿ ಮಾ.5ರೊಳಗೆ[email protected]ಈ ವಿಳಾಸಕ್ಕೆ ಕಳುಹಿಸುವಂತೆ ಕೋರಿದೆ. ಅಂಚೆ ಮೂಲಕ ನಿಗದಿ ಪಡಿಸಿರುವ ದಿನಾಂಕದ ನಂತರ ಬರುವಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹೆಚ್ಚಿನ ಮಾಹಿತಿಗೆhttps://pue.kar.nic.in/ನೋಡಬಹುದು.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಬಗ್ಗೆ ರಿಷಬ್​ ಶೆಟ್ಟಿ ಬೇಸರ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
