ಬಳ್ಳಾರಿ:ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್​ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ಮಂಗಳವಾರ ನಡೆದಿದೆ.
ಇದನ್ನು ಓದಿ:ದ್ವಿತೀಯ ಪಿಯು ಪೂರಕ ಪರೀಕ್ಷೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ
ಶ್ರೇಯಾ ಮೃತ ವಿದ್ಯಾರ್ಥಿನಿ. ಈಕೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಳಿಯ ಕೆ.ಎಸ್.ಪಿ.ಎನ್. ಕಾಲೇಜಿನ ಓದುತ್ತಿದ್ದಳು. ಫಲಿತಾಂಶ ನೋಡಲು ಕಾಲೇಜಿಗೆ ತೆರಳಿದ್ದ ಶ್ರೇಯಾ, ಫೇಲ್​ ಆಗಿದ್ದಕ್ಕೆ ಮನನೊಂದು ಚಲಿಸುತ್ತಿದ್ದ ರೈಲಿನಡಿ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ಆಕೆಯೊಂದಿಗಿದ್ದ ಗೆಳತಿ ರೂಪಾ ತಡೆಯುವ ಪ್ರಯತ್ನ ಮಾಡಿದ್ದಾದರೂ, ಹಳಿ ಮೇಲೆ ಬಿದ್ದ ಪರಿಣಾಮ ಶ್ರೇಯಾ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ರೂಪಾ ಕೈಗೂ ಏಟು ಬಿದ್ದಿತ್ತು.
ಇದನ್ನೂ ಓದಿ:ಹಸಿ ಮೀನು ತಿಂದು ಗಂಟಲು ಕೆರೆತವೆಂದು ಆಸ್ಪತ್ರೆಗೆ ಹೋದ ಯುವತಿಗೆ ಕಾದಿತ್ತು ಭಾರಿ ಶಾಕ್​!
ರೈಲ್ವೆ ಹಳಿಯ ಮೇಲೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ನೋಡಿದ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ರೂಪಾ ಸಹ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೇಯಾ ಮೃತಪಟ್ಟಿದ್ದಾಳೆ. ಇಬ್ಬರು ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದರು. ಈ ಸಂಬಂಧ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್: ಕಳೆನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 3 =
Remember me
