ಕೋಲಾರ:ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಮನೆಗೆ ನುಗ್ಗಿದ ದುಷ್ಕರ್ಮಿಗಳು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಮುಳಬಾಗಿಲು ನಗರದ ಹೊಸಪಾಳ್ಯದಲ್ಲಿ ಸಂಭವಿಸಿದೆ.
18 ವರ್ಷದ ಪ್ರಿಯಾಂಕ ಮೃತ ದುರ್ದೈವಿ. ಶ್ರೀನಿವಾಸಪುರ ಮೂಲದ ಯುವತಿ ಕುಟುಂಬ ಮುಳಬಾಗಿಲು ನಗರದಲ್ಲಿ ಬಾಡಿಗೆ ಮನೆಗೆ ವಾಸಕ್ಕೆಂದು ಇತ್ತೀಚಿಗೆ ಬಂದಿದ್ದರು. ಪ್ರಿಯಾಂಕ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಓದುತ್ತಿದ್ದಳು.ಇದನ್ನೂ ಓದಿರಿಅಕ್ಕನ ಕಣ್ಣೆದುರಲ್ಲೇ ಭಾವನ ಕಿವಿ ಕಚ್ಚಿ ತುಂಡರಿಸಿದ ಬಾಮೈದುನ!
ಸೋಮವಾರ ಸಂಜೆ ಯುವತಿ ಮನೆ ಬಳಿ ಓಡಾಡಿಕೊಂಡಿದ್ದಳು. ಬಳಿಕ ಮನೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಎಸ್ಪಿ ಕಾರ್ತಿಕ್ ರೆಡ್ಡಿ, ಎಎಸ್ಪಿ ಜಾಹ್ನವಿ, ಡಿವೈಎಸ್ಪಿ ಕೆ.ಸಿ.ರವಿ ಸ್ಥಳ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಯಿತು. ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಬಳಿಕ ಯುವತಿ ಸಾವಿಗೆ ಕಾರಣ ಏನೆಂದು ಹೊರಬರಲಿದೆ.
ತಾಯಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಬಾಲಕಿ ಆತ್ಮಹತ್ಯೆ?

ಭೂಮಿ- ಕಾವೇರಿ ತಂತ್ರಾಂಶ ಸರ್ವರ್​ ಡೌನ್​: ಜನರ ಪರದಾಟ, ಸರ್ಕಾರಕ್ಕೆ ಹಿಡಿಶಾಪ

ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ ವಿರೂಪಾಕ್ಷಪ್ಪ! ಮಸ್ಕಿ ಬೈ ಎಲೆಕ್ಷನ್​ ಭರ್ಜರಿ ಸಿದ್ಧತೆ

ಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − four =
Remember me
