ಯಾದಗಿರಿ:ಉಡುಪಿನ ವಿಚಾರಕ್ಕೆ ಉಡುಪಿಯಲ್ಲಿ ತಕರಾರು ತೆಗೆದಿದ್ದ ಆರು ವಿದ್ಯಾರ್ಥಿನಿಯರ ಸಾಲಿಗೆ ಮತ್ತೆ ಆರು ವಿದ್ಯಾರ್ಥಿನಿಯರು ಸೇರಿಕೊಂಡಿದ್ದಾರೆ. ಅಂದರೆ ರಾಜ್ಯದ ಇನ್ನೊಂದು ಕಡೆಯಲ್ಲೂ ಆರು ವಿದ್ಯಾರ್ಥಿನಿಯರು ಹಿಜಾಬ್​ಗಾಗಿ ಪಿಯುಸಿ ಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆ.
ತರಗತಿಯಲ್ಲಿ ಹಿಜಾಬ್ ಧರಿಸಿ ಕುಳಿತುಕೊಳ್ಳಲು ಅವಕಾಶ ಬೇಕು ಎಂದು ಆಗ್ರಹಿಸಿ ಉಡುಪಿಯಲ್ಲಿ ಆರು ವಿದ್ಯಾರ್ಥಿನಿಯರು ಪ್ರತಿಭಟಿಸಿದ ದಾರಿಯಲ್ಲೇ ಈ ಆರು ವಿದ್ಯಾರ್ಥಿನಿಯರು ಸಾಗಿದ್ದು, ಇವರು ಪಿಯುಸಿ ಪರೀಕ್ಷೆಗೂ ಹಿಜಾಬ್​ ಧರಿಸಿ ಹಾಜರಾಗಲು ಅವಕಾಶ ನೀಡಬೇಕು ಎಂದು ಕೇಳಿದ್ದಾರೆ.
ಯಾದಗಿರಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಪಿಯುಸಿ ಕಲಾ ವಿಭಾಗದ ಈ ವಿದ್ಯಾರ್ಥಿನಿಯರು ಇಂದು ಅರ್ಥಶಾಸ್ತ್ರದ ಪರೀಕ್ಷೆ ಬರೆಯಬೇಕಿತ್ತು. ಆದರೆ ಹಿಜಾಬ್​ ಧರಿಸಿ ಪರೀಕ್ಷೆಗೆ ಹಾಜರಾಗಲು ಮೇಲ್ವಿಚಾರಕರು ಅವಕಾಶ ನೀಡದ್ದಕ್ಕೆ ಈ ಆರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ವಾಪಸ್ ಆಗಿದ್ದಾರೆ.
ಎಫ್​ಡಿಎನಲ್ಲೂ ಡೀಲ್! ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ರಹಸ್ಯ ಬಯಲು

‘ನಾನು ನಿಮ್ಮ ಓಲ್ಡ್ ಸ್ಟುಡೆಂಟ್..’ ಎಂದು ಹೇಳಿ ಶಿಕ್ಷಕಿಗೇ ಮೋಸ ಮಾಡಿದ ವಂಚಕ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 2 =
Remember me
