ಮೈಸೂರು:ಪಟ್ಟಣದಲ್ಲಿ ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ, ಭಾನುವಾರವೂ ಮುಂದುವರಿದು ಯುವ ಬ್ರಿಗೇಡ್ ಸಂಚಾಲಕನ ಕೊಲೆಯಲ್ಲಿ ಅಂತ್ಯವಾಗಿದೆ. ಈ ಕೊಲೆಗೆ ಸಂಬಂಧಿಸಿದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಿ.ನರಸೀಪುರ ಪಟ್ಟಣದ ಹೊರ ವಲಯದ ಸಂತಮಾಳದ ಸಮೀಪದ ಸರ್ವಿಸ್ ಸೆಂಟರ್‌ನ ಬಳಿ ಈ ಘಟನೆ ನಡೆದಿದೆ. ಪಟ್ಟಣದ ಶ್ರೀರಾಂಪುರ ಕಾಲನಿ ನಿವಾಸಿ, ಯುವ ಬ್ರಿಗೇಡ್‌ನ ತಿ.ನರಸೀಪುರ ತಾಲೂಕು ಸಂಚಾ ಲಕ ವೇಣುಗೋಪಾಲ್ ನಾಯಕ್ (32) ಮೃತರು. ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ:ಜೈಲಿಗೆ ಹೋಗುವ ಭಯದಿಂದ ಪೊಲೀಸ್ ಠಾಣೆಯಲ್ಲೇ ಹಲ್ಲಿಯನ್ನು ನುಂಗಿದ ಆರೋಪಿ!
ಪ್ರಕರಣ ಸಂಬಂಧ, ನಿನ್ನೆ ಆರೋಪಿಗಳಾದ A1 ಮಣಿಕಂಠ(33), A2 ಆರೋಪಿ ಸಂದೇಶ್ (36) ಅವರನ್ನು ಪೊಲೀಸರು ಬಂಧಿಸಿದ್ದು, ಇಂದು ನಾಲ್ವರನ್ನು ಪೊಲೀಸರು ಅರೆಸ್ಟ್​​ ಮಾಡಿದ್ದಾರೆ. ಆರೋಪಿಗಳ ಪತ್ತೆಗೆ ಎರಡು ತಂಡ ರಚಿಸಿದ್ದ ಮೈಸೂರು‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಂದು A3 ಅನಿಲ್, A4 ಶಂಕರ್ ಅಲಿಯಾಸ್ ತುಪ್ಪ, A5 ಮಂಜು ಹಾಗೂ A6 ಹ್ಯಾರಿಸ್​ನ ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನ ಬಂಧಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಐವರು ಮೆಕ್ಸಿಕನ್ನರು ಸೇರಿ 6 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್​ ಮೌಂಟ್​ ಎವೆರೆಸ್ಟ್ ಬಳಿ ಪತನ
ನಡೆದಿದ್ದೇನು?:ಶನಿವಾರ ಹನುಮ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಮೆರವಣಿಗೆ ನಡೆದಿತ್ತು. ಹನುಮ ಜಯಂತಿ ವೇಳೆ ಮೆರವಣಿಗೆಯಲ್ಲಿ ಪುನೀತ್ ರಾಜ್​ ಕುಮಾರ್​ ಫೋಟೋ ಹಾಕಿದ್ದರು. ಇದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನಲೆ ವೇಣುಗೋಪಾಲ್​ ಹನುಮ ಜಯಂತಿ ಮೆರವಣಿಗೆಯಲ್ಲಿ ಪುನೀತ್ ಫೋಟೋ ಬೇಡ ಎಂದು ತೆಗೆಸಿದ್ದರು. ಇದರಿಂದ ಅಲ್ಲಿ ಜಗಳ ಶುರುವಾಗಿತ್ತು.
ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಸ್ಥಳದಲ್ಲಿದ್ದವರು ಎರಡೂ ಗುಂಪುಗಳನ್ನು ಸಮಾಧಾನ ಮಾಡಿ ಕಳುಹಿಸಿದ್ದರು. ಭಾನುವಾರ ರಾತ್ರಿ ಗಲಾಟೆ ಮುಂದುವರಿ ದಿದ್ದು, ವೇಣುಗೋಪಾಲ್ ಕೊಲೆಯಲ್ಲಿ ಅಂತ್ಯವಾಗಿದೆ.
ಇದನ್ನೂ ಓದಿ:ಹೊಸ ವ್ಯವಹಾರಕ್ಕೆ ಕೈ ಹಾಕಿದ ನಟ ಉಪೇಂದ್ರ; ಮದುವೆ, ಸಮಾರಂಭಗಳಿಗೆ ಬಾಡಿಗೆಗೆ ಸಿಗಲಿದೆ ತೋಟದ ಮನೆ
ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್​ ಕೊಲೆಗೆ ಹನುಮ ಜಯಂತಿಯಂದು ಹಾಕಲಾಗಿದ್ದ ಪುನೀತ್​ ರಾಜ್​ ಕುಮಾರ್ ಫೋಟೋವನ್ನು ತೆಗೆಸಿದ್ದೆ ಕಾರಣ ಎನ್ನಲಾಗುತ್ತಿದೆ. 6 ಮಂದಿ ವಿರುದ್ಧ ದೂರು ದಾಖಲಾಗಿದ್ದು,ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ಒತ್ತೆಯಾಳಾಗಿಟ್ಟು ಬಲವಂತವಾಗಿ ಮೂತ್ರ ಕುಡಿಸಿದ್ದಾರೆಂದು ಆರೋಪಿಸಿ ಸಿಕ್ಕಿ ಬಿದ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − two =
Remember me
