ಬೆಂಗಳೂರು:ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ`ಪುನೀತ್’ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು. ನಟ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಈ ಉಪಗ್ರಹಕ್ಕೆ ಪುನೀತ್ ಉಪಗ್ರಹ ಎಂದು ಹೆಸರಿಡಲಾಗಿದೆ ಎಂಬುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಹೇಳಿದ್ದಾರೆ.
ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, “ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುವುದು” ಎಂದರು.
ಸ್ಪರ್ಧೆಯ ಭಾಗವಾಗಿ ಪ್ರೌಢಶಾಲಾ ಮಕ್ಕಳಿಗೆ ಆನ್‌ಲೈನ್‌ ರಸಪ್ರಶ್ನೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಎಲ್ಲಾ 31 ಜಿಲ್ಲೆಗಳ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ಕೊಡಲಾಗಿದೆ ಎಂದು ಅವರು ತಿಳಿಸಿದರು.
ಸ್ವಾತಂತ್ರದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ಘೋಷಿಸಿದ್ದರು. ಈ ಪೈಕಿ, ಬೆಂಗಳೂರು ವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ‘ಕೆಜಿಎಸ್3ಸ್ಯಾಟ್’ ಉಪಗ್ರಹವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದು, ಮಲ್ಲೇಶ್ವರಂನಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಇವರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ನಟ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಈ ಉಪಗ್ರಹಕ್ಕೆ ಅವರ ಹೆಸರನ್ನಿಡಲಾಗಿದೆ. ಪ್ರಧಾನಿಯವರ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ” ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಉಪಗ್ರಹ ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಂಡರೆ ಸಾಲದು. ಬದಲಿಗೆ ಬಾಹ್ಯಾಕಾಶ, ಖಗೋಳ ವಿಜ್ಞಾನ, ಅಂತರಿಕ್ಷ ಇತ್ಯಾದಿಗಳ ಬಗ್ಗೆ ತಿಳಿದುಕೊಂಡು, ಸಂಭ್ರಮಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಹೀಗಾಗಿ ಸ್ಪರ್ಧೆ ಮತ್ತು ವಿಜೇತರಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ನುಡಿದರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೇರಿದಂತೆ ಇತರ ಹಿರಿಯ ವಿಜ್ಞಾನಿಗಳು ಸಭೆಯಲ್ಲಿ ಹಾಜರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 − eight =
Remember me
