ಶಿವಮೊಗ್ಗ:ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುತ್ತಿದ್ದ ಯುವಕನಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಟಿ-1ರ ನ್ಯಾಯಾಧೀಶರು ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಡಿ.ರಘು (25) ಶಿಕ್ಷೆಗೆ ಒಳಗಾದವ. ಈತ 2020ರ ಮೇ 6ರಂದು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದ. ಸಿಐಡಿ ಘಟಕದ ಸೈಬರ್ ಟಿಪ್‌ಲೈನ್ ನೀಡಿದ ಮಾಹಿತಿ ಆಧಾರದ ಮೇಲೆ ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖಾಧಿಕಾರಿ ಸೈಬರ್ ಠಾಣೆ ಇನ್‌ಸ್ಪೆಕ್ಟರ್ ಕೆ.ಟಿ.ಗುರುರಾಜ್ ಅವರು ರಘು ವಿರುದ್ಧ 2020ರ ಡಿ.24ರಂದು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು.
ಈ ಬಗ್ಗೆ ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಎಚ್.ದಯಾನಂದ್ ಅವರು ರಘು ಮೇಲಿನ ಆರೋಪಗಳು ಸಾಬೀತಾದ ಹಿನ್ನಲೆಯಲ್ಲಿ 2 ವರ್ಷ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸದಾ ಕಾರಾಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.
ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − eight =
Remember me
