ಶಿವಮೊಗ್ಗ:ಪೂಜೆ ನೆಪದಲ್ಲಿ ಅಪ್ರಾಪ್ತೆಯನ್ನು ದೇವಸ್ಥಾನಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಅರ್ಚಕನಿಗೆ ಇಲ್ಲಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಜೈಲ್ ರಸ್ತೆಯ 2ನೇ ತಿರುವಿನ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಅರ್ಚಕ ಶಿವಕುಮಾರ್ ಅಲಿಯಾಸ್ ಕುಮಾರ್ ಶಿಕ್ಷೆಗೆ ಗುರಿಯಾದವ.
2016ರಲ್ಲಿ ದೇವಸ್ಥಾನಕ್ಕೆ ಬರುತ್ತಿದ್ದ ಅಪ್ರಾಪ್ತೆಗೆ, ‘ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ತೆಗೆಯುವಂತೆ ಮಾಡುತ್ತೇನೆ’ ಎಂದು ಆಮಿಷ ತೋರಿಸಿ ಆಕೆ ಮೇಲೆ ಅತ್ಯಾಚಾರ ನಡೆಸಿದ್ದ. ಅಪ್ರಾಪ್ತೆ ನೀಡಿದ ದೂರಿನನ್ವಯ ಪೋಕ್ಸೊದಡಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಶಿವಕುಮಾರ್‌ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಬಿ.ಶಿವಪ್ರಸಾದ್, ಅಪರಾಧಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಕೆ.ಎಸ್.ಸತೀಶ್ ಸರ್ಕಾರದ ಪರ ವಾದ ಮಂಡಿಸಿದ್ದರು.
ವಾಮಾಚಾರ ನೆಪದಲ್ಲಿ ವಿಧವೆ ಬಳಿ 8.12 ಕೋಟಿ ಹಣ ಪೀಕಿದ, ಖಾಸಗಿ ವಿಡಿಯೋ ಇಟ್ಟುಕೊಂಡು ಹಿಂಸಿಸಿದ!

ಸಬ್​ರಿಜಿಸ್ಟ್ರಾರ್​ ಕೆಲಸಕ್ಕಾಗಿ 36 ಲಕ್ಷ ರೂ. ಕೊಟ್ಟವನ ಸ್ಥಿತಿ ಏನಾಯ್ತು?

ನಾನು ದಂಡ ಕಟ್ಟಿದ್ದೀನಿ, ಇನ್ನು 24 ಗಂಟೆ ಮಾಸ್ಕ್ ಹಾಕಲ್ಲ..!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 + eight =
Remember me
