ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ, ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ. ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ. ನಾವು ವೆಸ್ಟಂಡ್ ಹೋಟೆಲ್‌ನಲ್ಲಿಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸಿ ಕಮೀಷನ್ ಹೊಡೆಯಲು ಹುನ್ನಾರ ನಡೆಸಿದೆ ಎಂದು ಕುಮಾರಸ್ವಾಮಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
-ರೈತರಿಗೆ ಮೂರು ಪಾಳೆಯಲ್ಲಿ ನಿರಂತರ 5 ಗಂಟೆ ವಿದ್ಯುತ್ ಪೂರೈಕೆ.-ಉತ್ತರ ಪ್ರದೇಶದಿಂದ 300 ಮತ್ತು ಪಂಜಾಬಿನಿಂದ 600 ಮೆ.ವ್ಯಾಟ್ ವಿದ್ಯುತ್ ಖರೀದಿ.-ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿ, ರಾಜ್ಯದ ಎಲ್ಲ ವಿದ್ಯುತ್ ಉತ್ಪಾದನಾ ಘಟಕಗಳು ಗರಿಷ್ಠ ವಿದ್ಯುತ್ ಉತ್ಪಾದಿಸಲು ಕ್ರಮ.-ರಾಜ್ಯದ ಶಾಖೋತ್ಪನ್ನ ವಿದ್ಯುತ್ ಘಟಕಗಳಿಗೆ ಮರು ಚಾಲನೆ.-ಎಲ್ಲ ಕಲ್ಲಿದ್ದಲು ಸಂಸ್ಥೆಗಳಿಂದ 15 ಲಕ್ಷ ಮೆ.ಟನ್ ಪಡೆಯಲು ಕ್ರಮ.-ಅಲ್ಪಾವಧಿ ಆಧಾರದಲ್ಲಿ 1300 ಮೆ.ವ್ಯಾ. ವಿದ್ಯುತ್ ಖರೀದಿಗೆ ಕ್ರಮ.-ಕೆಪಿಸಿಎಲ್‌ನ ಅನಿಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಯಾಚರಣೆ ಆರಂಭಕ್ಕೆ ಕ್ರಮ.-ಪಾವಗಡದಲ್ಲಿ ಹೆಚ್ಚುವರಿಯಾಗಿ 300, ಕಲಬುರಗಿಯಲ್ಲಿ 500 ಮೆ.ವ್ಯಾ. ಸೋಲಾರ್ ಪಾರ್ಕ್ ಸ್ಥಾಪನೆ.-ಛತ್ತೀಸ್‌ಗಡದಲ್ಲಿ ಖಾಸಗಿ/ಜಂಟಿ ಹೂಡಿಕೆಯಡಿ ಕ್ಯಾಪ್ಟೀವ್ ಕಲ್ಲಿದ್ದಲು ಗಣಿ ಆರಂಭಕ್ಕೆ ಸಜ್ಜು.-ಇತರ ರಾಜ್ಯಗಳಲ್ಲಿ ಸ್ಟ್ರೆಸ್ಡ್ ಔಟ್ ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಖರೀದಿ ಪ್ರಸ್ತಾಪ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 12 =
Remember me
