ವಿಜಯವಾಣಿ ಸುದ್ದಿಜಾಲ ಬೆಂಗಳೂರು
ವಾಲ್ಮೀಕಿ ನಿಗಮದ ಹಣವನ್ನು ಚುನಾವಣಾ ಸಮಯದಲ್ಲಿ ಮದ್ಯ ಹಾಗೂ ಐಷಾರಾಮಿ ಕಾರುಗಳನ್ನು ಖರೀದಿಸಲು ಬಳಸಿಕೊಳ್ಳಲಾಗಿದೆ ಎಂಬ ಸ್ಪೋಟಕ ಅಂಶ ಜಾರಿ ನಿರ್ದೇಶನಾಲಯ (ಇಡಿ) ತನಿಖೆಯಲ್ಲಿ ಪತ್ತೆಯಾಗಿದೆ. ಜು.10ರಂದು ಇಡಿ ಅಧಿಕಾರಿಗಳು ನಾಲ್ಕು ರಾಜ್ಯಗಳ 23 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಆಂಧ್ರಪ್ರದೇಶ, ತೆಲಂಗಾಣದಲ್ಲಿ 18 ನಕಲಿ ಖಾತೆಗಳಿಗೆ ಒಟ್ಟು 90 ಕೋಟಿ ರೂ. ಹಣವನ್ನು ನಕಲಿ ಮತ್ತು ಶೆಲ್ ಖಾತೆಗಳ ಮೂಲಕ ವರ್ಗಾವಣೆಯಾಗಿತ್ತು. ಆ ನಂತರ ನಗದು ಆಗಿ ಮಾರ್ಪಟ್ಟಿದೆ. ಆರೋಪಿಗಳ ನಡುವೆ ನಗದು ಮತ್ತು ಚಿನ್ನಾಭರಣಗಳ ವ್ಯವಹಾರ ನಡೆದಿದೆ. ಸಾರ್ವತ್ರಿಕ ಚುನಾವಣೆಗಳಿಗೆ ಮದ್ಯ ಸಂಗ್ರಹಿಸಲು ಹೆಚ್ಚಿನ ಪ್ರಮಾಣದ ಹಣ ಬಳಸಲಾಗಿದೆ ಎಂಬ ಅಂಶ ಇಡಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಿಂದ ಬಹಿರಂಗಗೊಂಡಿದೆ. ಇದೇ ಹಣದಲ್ಲಿ ಲ್ಯಾಂಬೋರ್ಗಿನಿ ಸೇರಿ ಐಷಾರಾಮಿ ವಾಹನಗಳನ್ನು ಖರೀದಿಸಲಾಗಿದೆ. ಬಿ.ನಾಗೇಂದ್ರ ಮತ್ತು ಬಸನಗೌಡ ದದ್ದಲ್​ಗೆ ಸೇರಿದ ಸ್ಥಳಗಳಲ್ಲಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಗೇಂದ್ರ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಸಹವರ್ತಿಗಳು ನಗದು ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಅಕ್ರಮ ಬಗ್ಗೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸದಲ್ಲಿ ಪುರಾವೆಗಳು ಪತ್ತೆಯಾಗಿವೆ.
ಇಂದು ಮಾಜಿ ಸಚಿವ ನಾಗೇಂದ್ರ ಕಸ್ಟಡಿ ಅವಧಿ ಅಂತ್ಯ: ಜು.12ರಂದು ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿದ ಇಡಿ ಅಧಿಕಾರಿಗಳು ಜನ ಪ್ರತಿನಿಧಿ ನ್ಯಾಯಾಲಯ ಎದುರು ಹಾಜರುಪಡಿಸಿದ್ದರು. ನಾಗೇಂದ್ರ ಅವರ ಕಸ್ಟಡಿ ಅವಧಿ ಗುರುವಾರ ಅಂತ್ಯವಾಗಲಿದ್ದು, ಕೋರ್ಟ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದು, ವಿಚಾರಣೆ ನಡೆಸಿ ಸಂಜೆ ವೇಳೆಗೆ ಬಿಡುಗಡೆಗೊಳಿಸಿದರು.
ಹಗರಣದ ಆರೋಪಿ ಗಳ ಹೇಳಿಕೆ ಆಧರಿಸಿ ಬುಧವಾರ ಬೆಳಗ್ಗೆ ಡಾಲರ್ಸ್ ಕಾಲನಿ ನಿವಾಸದಲ್ಲಿ ವಶಕ್ಕೆ ಪಡೆಯ ಲಾಯಿತು. ನಂತರ ಅಧಿಕಾರಿಗಳು ಅವರನ್ನು ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ಕರೆ ತಂದು ವಿಚಾರಣೆ ನಡೆಸಲಾಯಿತು. ವಾಲ್ಮೀಕಿ ನಿಗಮ ಹಗರಣದ ಹಣ ಮಂಜುಳಾ ಖಾತೆಯಿಂದ ಇತರ ಆರೋಪಿಗಳ ಖಾತೆಗೆ ವರ್ಗಾವಣೆಯಾಗಿರುವುದು ತನಿಖೆ ವೇಳೆ ಪತ್ತೆಯಾಗಿದೆ.
ಮಂಜುಳಾ ಅವರನ್ನು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಂತೆಯೇ ಹಲವು ಪ್ರಶ್ನೆಗಳು, ಅನುಮಾನಗಳೂ ಹುಟ್ಟಿಕೊಂಡಿವೆ. 187 ಕೋಟಿ ರೂ. ಹಗರಣದಲ್ಲಿ ಮಾಜಿ ಸಚಿವರ ಪತ್ನಿಯ ಪಾತ್ರವೇನು? ಆರೋಪಿಗಳು ವಿಚಾರಣೆ ವೇಳೆ ಮಂಜುಳಾ ಹೆಸರು ಹೇಳಿದ್ದಾರಾ? ಆರೋಪಿಗಳಿಂದ ಮಂಜುಳಾ ನಾಗೇಂದ್ರ ಪರವಾಗಿ ಹಣ ಪಡೆದಿದ್ದಾರಾ? ಅಕ್ರಮದ ಮಾಹಿತಿ ಇತ್ತೇ? 5 ದಿನ ನಾಗೇಂದ್ರ ವಿಚಾರಣೆ ವೇಳೆ ಮಂಜುಳಾ ವಿರುದ್ಧ ಸಾಕ್ಷಿಗಳು ಸಿಕ್ಕಿವೆಯೇ ಎಂಬ ಹಲವು ಪ್ರಶ್ನೆಗಳು ಮೂಡಿವೆ.
ಈ ಮಧ್ಯೆ, ಪ್ರಕರಣದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ, ಹೈದರಾಬಾದ್ ಮೂಲದ ಖಾಸಗಿ ಬ್ಯಾಂಕಿನಿಂದ ಬಳ್ಳಾರಿ ಜಿಲ್ಲೆಯ ಸುಮಾರು 20ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ಲಕ್ಷಾಂತರ ರೂ. ವರ್ಗಾವಣೆ ಆಗಿರುವ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ. ವಾಲ್ಮೀಕಿ ಹಗರಣ ಮಂಗಳವಾರ ವಿಧಾನಸಭೆ ಕಲಾಪದಲ್ಲಿಯೂ ಭಾರಿ ಚರ್ಚೆಗೆ ಗ್ರಾಸವಾಯಿತು. ಇದೀಗ ನಾಗೇಂದ್ರ ಪತ್ನಿಯನ್ನೂ ಇಡಿ ವಶಕ್ಕೆ ಪಡೆದಿರುವುದರಿಂದ ಪ್ರತಿಪಕ್ಷಗಳಿಗೆ ಪ್ರಬಲ ಅಸ್ತ್ರ ದೊರೆತಂತಾಗಲಿದೆ. ಗುರುವಾರ ನಡೆಯುವ ಕಲಾಪದಲ್ಲಿ ಈ ವಿಚಾರ ಗದ್ದಲಕ್ಕೆ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ.
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ, ಮುಡಾ ನಿವೇಶನಗಳ ಹಂಚಿಕೆ ಅಕ್ರಮದ ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಪ್ರತಿಭಟನಾ ಸಭೆ ಗುರುವಾರ ಹಮ್ಮಿಕೊಂಡಿದೆ. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 10ಕ್ಕೆ ಪ್ರತಿಭಟನಾ ಸಮಾವೇಶ ನಡೆಯಲಿದೆ. ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮುಡಾ ಅಕ್ರಮದ ತನಿಖೆ ಸಿಬಿಐಗೆ ಒಪ್ಪಿಸಬೇಕು, ಪರಿಶಿಷ್ಟ ಜಾತಿ- ಪಂಗಡಗಳ ಉಪ ಯೋಜನೆ ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಕೆ ವಿರೋಧಿಸಿ ಈ ಚಳವಳಿ ನಡೆಯಲಿದೆ. ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಂಸದ, ಮಾಜಿ ಸಚಿವರು, ಮಾಜಿ ಶಾಸಕರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಇನ್ನಿತರ ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಳಿ ಪ್ರಕಾರ ಪಾಲ್ಗೊಳ್ಳುವ ಸಾಧ್ಯತೆಗಳಿವೆ.
ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ!

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ವಿಧೇಯಕಕ್ಕೆ ತಡೆ ಸೂಕ್ತ ತೀರ್ಮಾನ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 10 =
Remember me
