ಕೀರ್ತಿನಾರಾಯಣ ಸಿ. ಬೆಂಗಳೂರುಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ, ಬಿ ಮತ್ತು ಸಿ ದರ್ಜೆಯ (ಐಪಿಎಸ್ ಅಧಿಕಾರಿಗಳನ್ನು ಹೊರತುಪಡಿಸಿ) ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಿರ-ಚರಾಸ್ತಿಯನ್ನು ಖರೀದಿಸಲು, ಮಾರಾಟ ಮಾಡಲು ಹಾಗೂ ಉಡುಗೊರೆ ರೂಪದಲ್ಲಿ ಪಡೆಯುವ ಮುನ್ನ ಪ್ರಾಧಿಕಾರದಿಂದ ಅನುಮತಿ ಪಡೆಯುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿರುವ ರಾಜ್ಯ ಪೊಲೀಸ್ ಇಲಾಖೆ, ಆಸ್ತಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸ್ಪಷ್ಟ ದಾಖಲಾತಿಗಳನ್ನು ಸಲ್ಲಿಸಲು ಆದೇಶಿಸಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ 24 ಅನ್ವಯ ಚರಾಸ್ತಿ, ಸ್ಥಿರಾಸ್ತಿ ಮತ್ತು ಬೆಲೆಬಾಳುವ ಸ್ವತ್ತು ಉಪ ನಿಯಮ (3) ಪ್ರಕಾರ ಸರ್ಕಾರಿ ನೌಕರ ಅಥವಾ ಆತನ ಕುಟುಂಬ ಸದಸ್ಯರ ಹೆಸರಲ್ಲಿ ಆಸ್ತಿ ಖರೀದಿಸುವ ಮೊದಲೇ ಪ್ರಾಧಿಕಾರಕ್ಕೆ ತಿಳಿಸಬೇಕು. ಪ್ರಾಧಿಕಾರದ ಗಮನಕ್ಕಿಲ್ಲದೆ ಗುತ್ತಿಗೆ, ಅಡಮಾನ, ಖರೀದಿ, ಮಾರಾಟ, ಉಡುಗೊರೆ ಮೂಲಕ ಪಡೆಯಲು ಅವಕಾಶ ಇಲ್ಲ. ಒಂದು ವೇಳೆ ಪ್ರಾಧಿಕಾರಕ್ಕೆ ತಿಳಿಸದೆ ಇಂತಹ ವ್ಯವಹಾರ ಮಾಡಿದ್ದಲ್ಲಿ 2 ತಿಂಗಳ ಒಳಗಾಗಿ ಪೂರಕ ದಾಖಲಾತಿಗಳು ಹಾಗೂ ಸಮರ್ಥನೀಯ ಕಾರಣಗಳೊಂದಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕೆಂದು ಸ್ಪಷ್ಟಪಡಿಸಿದೆ.
ಒಂದು ವೇಳೆ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೆ ಆಸ್ತಿ ಖರೀದಿ ಅಥವಾ ಮಾರಾಟ ಮಾಡಿದ್ದರೆ 2 ತಿಂಗಳ ಒಳಗಾಗಿಯೂ ವರದಿ ಮಾಡದಿದ್ದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕೆಎಸ್​ಪಿ (ನಡತೆ) ನಿಯಮಗಳನ್ನು ಉಲ್ಲಂಘನೆ ಆರೋಪದಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ (ಆಡಳಿತ) ಸೌಮೇಂದು ಮುಖರ್ಜಿ ಹೊರಡಿಸಿರುವ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
ಗಿಫ್ಟ್ ಪ್ರಕರಣಗಳೇ ಜಾಸ್ತಿ:ಉಡುಗೊರೆ ರೂಪದಲ್ಲಿ ಜಮೀನು ಅಥವಾ ನಿವೇಶನಗಳನ್ನು ಪಡೆಯುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ ಎಂದು ಮೂಲಗಳು ತಿಳಿಸಿವೆ. ಅನುಮತಿ ಕೋರಿ ಅರ್ಜಿ ಸಲ್ಲಿಸಿದಾಗ ಆಸ್ತಿಗೆ ಸಂಬಂಧಪಟ್ಟಂತಹ ದಾಖಲಾತಿಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮನವಿ ತಿರಸ್ಕೃತಗೊಳುತ್ತಿವೆ ಎಂದು ಹೇಳಲಾಗುತ್ತಿದೆ.
ಬೇನಾಮಿ ಸ್ವತ್ತು:ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಲೋಕಾಯುಕ್ತ ಪೊಲೀಸರ ದಾಳಿ ಸಂದರ್ಭದಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಸಾಕಷ್ಟು ಪ್ರಕರಣಗಳು ವರದಿಯಾಗಿವೆ. ಇದೇ ಕಾರಣಕ್ಕಾಗಿ ಕೆಲ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿ ಬೇನಾಮಿಗಳ ಹೆಸರಲ್ಲಿ ಆಸ್ತಿ ನೋಂದಣಿ ಮಾಡಿ ವಂಚಿಸುತ್ತಿರುವ ಆರೋಪಗಳಿವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − nine =
Remember me
