ರಾಮನಗರ:ಪ್ರೀತಿಯನ್ನು ನಿರಾಕರಿಸಿದ್ದ ಅಪ್ರಾಪ್ತ ವಯಸ್ಕಳ ಮುಖದ ಮೇಲೆ ಯುವಕನೊಬ್ಬ ಆ್ಯಸಿಡ್ ಎರಚಿ ಗಾಯಗೊಳಿಸಿ ಪರಾರಿಯಾದ ಪ್ರಸಂಗ ನಡೆದಿದೆ. ರಾಮನಗರ ಜಿಲ್ಲೆಯಲ್ಲಿ ಇಂದು ಈ ಪ್ರಕರಣ ನಡೆದಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕನಕಪುರದ ಕುರುಪೇಟೆ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು ಎಂಬಾತನಿಂದ ಆ್ಯಸಿಡ್ ದಾಳಿ ನಡೆದಿದೆ. ಕನಕಪುರ ಬೈಪಾಸ್​ ರಸ್ತೆಯ ನಾರಾಯಣಪ್ಪ ಕೆರೆ ಬಳಿ ಈ ಘಟನೆ ನಡೆದಿದೆ. ಈತ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ 17 ವರ್ಷದ ಹುಡುಗಿ ಮುಖಕ್ಕೆ ಆ್ಯಸಿಡ್ ಎರಚಿದ್ದಾನೆ.
ಆ್ಯಸಿಡ್ ದಾಳಿಯಿಂದಾಗಿ ಯುವತಿಯ ಮುಖ ಹಾಗೂ ಎಡಗಣ್ಣು ಗಾಯಗೊಂಡಿದೆ. ತೀವ್ರ ಆಘಾತಕ್ಕೆ ಒಳಗಾದ ಈಕೆಯನ್ನು ಕೂಡಲೇ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅಲ್ಲಿಂದ ಬಳಿಕ ಬೆಂಗಳೂರಿನ ನಿಮ್ಹಾನ್ಸ್​ಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಬೈಕ್​ನಲ್ಲಿ ಬಂದು ಆ್ಯಸಿಡ್ ಹಾಕಿರುವ ಆರೋಪಿ ಪರಾರಿಯಾಗಿದ್ದು, ಆತನ ವಿರುದ್ಧ ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ವಿದ್ಯಾರ್ಥಿಗಳೇ.. ವೀರ್ಯಾಣು ದಾನ ಮಾಡಿ: ಸ್ಪರ್ಮ್ ಬ್ಯಾಂಕ್​ಗಳಿಂದ ಹೀಗೊಂದು ಮನವಿ; ಎಲ್ಲಿ, ಏಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
