ಉಡುಪಿ:ಕರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ತಿಗೆ ಮಠ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆಯ ನಡುವೆಯೂ ಪ್ರತಿದಿನ ನಿರಂತರ ಪೂಜೆ, ಅನುಷ್ಠಾನದಲ್ಲಿ ತೊಡಗಿದ್ದಾರೆ.
ಸ್ವಾಮೀಜಿ ಪೂಜೆ ಜಪ ಅನುಷ್ಠಾನಗಳಲ್ಲಿ ತೊಡಗಿರುವ ಫೋಟೋ ನೋಡುತ್ತಿರುವ ಭಕ್ತರಲ್ಲಿ ನೆಮ್ಮದಿ ಮೂಡುತ್ತಿದೆ.
ಉಡುಪಿಯಲ್ಲಿ ಚಾತುರ್ಮಾಸ್ಯ ವೃತ ಕೈಗೊಂಡಿದ್ದ ಸಂದರ್ಭದಲ್ಲಿ ಜ್ವರದ ಲಕ್ಷಣ ಕಂಡು ಬಂದಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಕರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಪಂಚಮಿ ಹಬ್ಬಕ್ಕೆ ಬರದಂತೆ ಡಂಗುರ!
ಪಿಪಿಇ ಕಿಟ್ ಧರಿಸಿಕೊಂಡೇ ಶ್ರೀಗಳ ಶಿಷ್ಯವೃಂದ ಸ್ವಾಮೀಜಿಯ ಪೂಜೆಗೆ ಸಹಕರಿಸುತ್ತಿರುವುದು ಫೋಟೋದಲ್ಲಿ ಕಾಣಬಹುದಾಗಿದೆ.ಶ್ರೀಗಳ ಆರೋಗ್ಯ ಚೆನ್ನಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಒಂದು ವಾರ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಭಕ್ತರು ಆತಂಕಪಡುವ ಅಗತ್ಯ ಇಲ್ಲ ಎಂದು ಕೆಎಂಸಿ ವೈದ್ಯರು ಹೇಳಿದ್ದಾರೆ. ಚಿಕಿತ್ಸೆ ನಡುವೆ ಅವರಷ್ಟಕ್ಕೆ ಪೂಜೆ ಪುನಸ್ಕಾರದಲ್ಲಿ ತೊಡಗಿಸಿಕೊಳ್ಳುತ್ತಾರೆ. ರೋಗದ ಬಗ್ಗೆಯೇ ಚಿಂತಿಸದೆ ಮಾನಸಿಕವಾಗಿ ನೆಮ್ಮದಿಯಿಂದ ಇರುವುದು ಕೂಡ ಅತೀ ಮುಖ್ಯ ಎಂದೂ ವೈದ್ಯರು ಹೇಳಿದ್ದಾರೆ.
ವಿಳಾಸ ಕೊಡಿ ಪ್ಲೀಸ್‌… ಅಜ್ಜಿಯ ಹುಡುಕಾಟದಲ್ಲಿ ನಟ ಸೋನು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + thirteen =
Remember me
