ಪುತ್ತೂರು:ಹಾಡಹಗಲೇ ಯುವತಿಯೊಬ್ಬಳನ್ನು ಮನಸೋಇಚ್ಛೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಇಂದು(ಮಂಗಳವಾರ) ಸಂಭವಿಸಿದೆ.
ಗಿರಿಜಾ ಎಂಬುವರ ಪುತ್ರಿ ಜಯಶ್ರೀ(23) ಕೊಲೆಯಾದ ದುರ್ದೈವಿ. ಕನಕಮಜಲಿನ ಉಮೇಶ ಎಂಬಾತ ಜಯಶ್ರೀ ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿ ಹೊಟ್ಟೆಗೆ ಇರಿದು ಚೂರಿಯನ್ನು ಹೊಟ್ಟೆಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಉಮೇಶ ಕೆಲ ಸಮಯದಿಂದ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಆಗಾಗ್ಗೆ ಜಯಶ್ರೀ ಮನೆಗೆ ಬರುತ್ತಿದ್ದನು. ಆದರೆ ಇತ್ತೀಚೆಗೆ ಆತನ ನಡತೆ ಇಷ್ಟವಾಗದ ಕಾರಣ ನವೆಂಬರ್‌ನಿಂದ ಆತನನ್ನು ದೂರವಿಟ್ಟಿದ್ದಳು. ಇದರಿಂದ ಅಸಮಾಧಾನಗೊಂಡ ಉಮೇಶ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ತೀವ್ರ ರಕ್ತಸ್ರಾವವಾಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರಾದರೂ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ. ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 16 =
Remember me
