ಹುಬ್ಬಳ್ಳಿ:ಸಾರಿಗೆ ನೌಕರರ ಮುಷ್ಕರದ ಕಾರಣ ಬಸ್ ಸೇವೆ ಲಭ್ಯವಿಲ್ಲದೆ ಉಂಟಾಗಿರುವ ತೊಂದರೆ ಒಂದೆಡೆಯಾದರೆ ಸಾರ್ವಜನಿಕರು ಇಂದು ಇನ್ನೂ ಒಂದು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅದು ಆರೋಗ್ಯ ಸೇವೆಗೆ ಸಂಬಂಧಿಸಿದ ಮುಷ್ಕರ ! ಆಯುರ್ವೇದ ವೈದ್ಯರಿಗೂ ಶಸ್ತ್ರ ಚಿಕಿತ್ಸೆ ಅವಕಾಶ ನೀಡಿದ್ದನ್ನು ವಿರೋಧಿಸಿ ಖಾಸಗಿ ಆಸ್ಪತ್ರೆಗಳಿಂದು ಒಪಿಡಿ ಸೇವೆ ಬಂದ್ ಮಾಡಿವೆ.
ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ (ಒಪಿಡಿ) ಬಂದ್ ಹಿನ್ನೆಲೆಯಲ್ಲಿ ರೋಗಿಗಳು ಪರದಾಡುವಂತಾಗಿದೆ‌. ಆಯುಷ್ ವೈದ್ಯರಿಗೂ ಶಸ್ತ್ರಚಿಕಿತ್ಸೆ ಮಾಡಲು ಅವಕಾಶ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಒಪಿಡಿ ಬಂದ್ ಗೆ ಕರೆ ನೀಡಿತ್ತು ನಗರದ. 800ಕ್ಕೂ ಅಧಿಕ ವೈದ್ಯರು ಬೆಂಬಲ ನೀಡಿದ್ದಾರೆ.
ಇದನ್ನೂ ಓದಿ:‘ಸಾರ್ವಜನಿಕರು ಸಹಕರಿಸಿ’ – ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನವಿ !
ಆ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳು ಒಪಿಡಿ ಬಂದ್ ಮಾಡಿದ್ದಾರೆ. ಇದರಿಂದ ರೋಗಿಗಳು ಪರದಾಡುವಂತಾಗಿದೆ‌. ಒಳ ರೋಗಿಗಳೂ ವೈದ್ಯರ ಸೇವೆ ಸಿಗದೆ ಪರದಾಡುತ್ತಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಸಾರಿಗೆ​ ನೌಕರರ ಮುಷ್ಕರ – ಎಲ್ಲೆಲ್ಲಿ ಏನೇನು ಸ್ಥಿತಿಗತಿ..?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 8 =
Remember me
