ಬೆಂಗಳೂರು:ಕೆಲ ಮಾಧ್ಯಮಗಳಲ್ಲಿ ಕರೊನಾ ಪರೀಕ್ಷೆಗೆ ನಾಲ್ಕು ಅಥವಾ ನಾಲ್ಕೂವರೆ ಸಾವಿರ ರೂ. ತೆಗೆದುಕೊಳ್ಳಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ್ದೇನೆ. ಸರ್ಕಾರ ಇದುವರೆಗೆ 6 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಟೆಸ್ಟ್ ಮಾಡಿದೆ. ನಯಾ ಪೈಸೆ ತೆಗೆದುಕೊಂಡಿಲ್ಲ. ಸರ್ಕಾರದಿಂದ ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿಯವರಿಗೂ ದರ ನಿಗದಿ ಮಾಡಲಾಗಿದೆ, ರೋಗಿಗೆ 2,200 ರೂ. ದರ ಪಡೆಯಬೇಕು ಎಂದು ನಿಗದಿಪಡಿಸಲಾಗಿದೆ. ಒಂದು ವೇಳೆ ಹೆಚ್ಚು ದರ ಪಡೆದರೆ ಕ್ರಮ ಜರುಗಿಸಲಾಗುವುದು ಎಂದು ಸುಧಾಕರ್ ತಿಳಿಸಿದರು.
ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ. ಅವುಗಳ ಪೈಕಿ ಕೆಲ ಲ್ಯಾಬ್​ಗಳ ಮೇಲೆ ಒತ್ತಡವಿದೆ. ಇದನ್ನು ನಿವಾರಿಸಿ ದಿನದ 24 ತಾಸಿನಲ್ಲಿ ವರದಿ ನೀಡುವ ವ್ಯವಸ್ಥೆ ಜಾರಿಗೊಳಿಸಲು ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ನೇಮಕ ಮಾಡಲಾಗಿದೆ. ಹಾಗೆಯೇ ಟೆಸ್ಟ್​ಗಳ ಸಂಖ್ಯೆಯನ್ನು ದಿನವೊಂದಕ್ಕೆ 30 ಸಾವಿರಕ್ಕೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಖಾಸಗಿ ಲ್ಯಾಬ್​ಗಳೂ ಕೂಡ ಪೂರ್ಣ ಪ್ರಮಾಣದಲ್ಲಿ ಟೆಸ್ಟ್​ಗಳನ್ನು ಮಾಡಲೇಬೇಕು. ಒಂದು ವೇಳೆ ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು. ಅಂತಹ ಖಾಸಗಿ ಮೆಡಿಕಲ್ ಕಾಲೇಜುಗಳ ಮಾನ್ಯತೆ ನವೀಕರಣ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಕರೊನಾ ನಿಯಂತ್ರಣದಲ್ಲಿದ್ದು ಜನರು ಆತಂಕ ಪಡುವ ಅಗತ್ಯವಿಲ್ಲ. ಇದೊಂದು ಮಾರಣಾಂತಿಕ ರೋಗ ಎಂಬ ಭೀತಿಯಲ್ಲಿ ಅನೇಕರು ಮಾನಸಿಕ ಒತ್ತಡ ಮತ್ತು ಖಿನ್ನತೆಗೆ ಒಳಗಾಗಿದ್ದಾರೆ. ಅಂತಹ ಆತಂಕಕಾರಿ ಪರಿಸ್ಥಿತಿ ಇಲ್ಲ.| ಡಾ. ಕೆ. ಸುಧಾಕರ್ವೈದ್ಯಕೀಯ ಶಿಕ್ಷಣ ಸಚಿವ
24 ತಾಸು ಕಾರ್ಯನಿರ್ವಹಿಸಲಿದೆ ಕಾಲ್​ಸೆಂಟರ್:ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿ ಗೊಂದಲ ಆಗಿರುವುದು ನಿಜ. ಅದನ್ನು ಸರಿಪಡಿಸಲಾಗುತ್ತಿದೆ. ಸೋಮವಾರದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ. ಒಂದು ವೇಳೆ ಎಲ್ಲಿಯಾದರೂ ಚಿಕಿತ್ಸೆಗೆ ದಾಖಲು, ಟೆಸ್ಟ್ ವರದಿಗಳಿಗೆ ಸಂಬಂಧಿಸಿದ ದೂರು ಇದ್ದಲ್ಲಿ, ಚಿಕಿತ್ಸೆ ನಿರಾಕರಿಸಿದರೆ 1912 ಸಂಖ್ಯೆಗೆ ಕರೆ ಮಾಡಿದರೆ ತಕ್ಷಣ ಸ್ಪಂದಿಸಲಾಗುತ್ತದೆ. ಇದಕ್ಕಾಗಿಯೇ ದಿನದ 24 ತಾಸು ಕಾರ್ಯ ನಿರ್ವಹಿಸುವ ಕಾಲ್ ಸೆಂಟರ್ ಆರಂಭಿಸಲಾಗಿದೆ ಎಂದು ಸಚಿವರು ಹೇಳಿದರು. ನಗರದಲ್ಲಿ ಅಗತ್ಯ ಸಂಖ್ಯೆಯ ಆಂಬುಲೆನ್ಸ್ ನಿಯೋಜಿಸಲಾಗುತ್ತಿದೆ. ಅದಕ್ಕೆ ಪ್ರತ್ಯೇಕವಾಗಿ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಹಾಲಿ 108 ಸೇವೆಯಡಿ ಕಾರ್ಯ ನಿರ್ವಹಿಸುತ್ತಿರುವ ಆಂಬ್ಯುಲೆನ್ಸ್​ಗಳ ಹೊರತಾಗಿ ನಗರದ ಪ್ರತಿ ವಾರ್ಡ್​ಗೆ ಎರಡರಂತೆ ಆಂಬುಲೆನ್ಸ್ ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ:ಕಾಶಿ ವಿಶ್ವನಾಥನ ಭಕ್ತರಿಗೊಂದು ಸಿಹಿ ಸುದ್ದಿ!
ಆತಂಕ ಬೇಡ:ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಅದನ್ನು ನಿರೀಕ್ಷಿಸಲಾಗಿತ್ತು, ಇನ್ನೂ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರು ಇದಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ನಮ್ಮ ವೈದ್ಯರು ಮತ್ತು ಸಿಬ್ಬಂದಿ ಕೂಡ ಹೈರಾಣಾಗಿದ್ದಾರೆ. ವಾಸ್ತವ ಸಂಗತಿ ಅರ್ಥ ಮಾಡಿಕೊಂಡು ಸಾರ್ವಜನಿಕರು, ಪ್ರತಿಪಕ್ಷ ನಾಯಕರು ಸರ್ಕಾರದ ಜತೆ ಸಹಕರಿಸಬೇಕು ಎಂದು ಸುಧಾಕರ್ ಕೋರಿದರು.
ಬೆಡ್​ಗಳ ಕೊರತೆ ಇಲ್ಲ:ಕರೊನಾ ಕೇರ್ ಸೆಂಟರ್, ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 819 ಹಾಸಿಗೆಗಳ ಪೈಕಿ 152 ಖಾಲಿಯಿವೆ, ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 1,899 ಹಾಸಿಗೆ ಪೈಕಿ 779 ಲಭ್ಯ ಇವೆ, ಸರ್ಕಾರಿ ಆಸ್ಪತ್ರೆಗಳಲ್ಲಿ 611ರಲ್ಲಿ ಇನ್ನೂ 105 ಖಾಲಿಯಿವೆ. ಹೀಗಾಗಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ ಒಂದೆರಡು ದಿನದಲ್ಲಿ ಸರಿಯಾಗಲಿದೆ ಎಂದು ಸಚಿವರು ಹೇಳಿದರು.
ಮತ್ತೊಂದು ಮಾರಕ ಕಾಯಿಲೆಯ ಎಚ್ಚರಿಕೆ ರವಾನಿಸಿದೆ ಚೀನಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − ten =
Remember me
