ಹುಬ್ಬಳ್ಳಿ:ನಗರದ ಯುವಕನೊಬ್ಬನಿಗೆ ಕರೊನಾ ಸೋಂಕು ದೃಢಪಟ್ಟ ನಂತರ, ಆತನಿಗೆ ನೆರವಾಗಿದ್ದ ಆರೋಗ್ಯ ಮತ್ತು ಪೊಲೀಸ್ ಸಿಬ್ಬಂದಿಗೂ ಕ್ವಾರಂಟೈನ್​ಗೆ ಸೂಚಿಸಲಾಗಿದೆ.
ಸೋಂಕಿತನನ್ನು ಮೊದಲು ಪರೀಕ್ಷಿಸಿದಾಗ ಕರೊನಾ ದೃಢಪಟ್ಟಿರಲಿಲ್ಲ. ಆದರೆ, ರೋಗ ಲಕ್ಷಣಗಳಿದ್ದವು. ಹಾಗಾಗಿ ಆತನನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಆ ಸಮಯದಲ್ಲಿ ಆತನ ಉಪಚಾರಕ್ಕಾಗಿ ನೇಮಕಗೊಂಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಸ್ವಯಂ ಪ್ರೇರಿತನಾಗಿ ತನ್ನ ಆರೋಗ್ಯ ಪರೀಕ್ಷಿಸಿಕೊಳ್ಳಲು ಅಪೇಕ್ಷಿಸಿದ್ದರು. ಸದ್ಯ ಅವರನ್ನು ಅದೇ ಹೋಟೆಲ್​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಸೋಂಕಿತನ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಕೂಡಲೆ ಆತನನ್ನು ಕಿಮ್್ಸ ಆಸ್ಪತ್ರೆಗೆ ಸ್ಥಳಾಂತರಿಸುವಲ್ಲಿ ಕಮರಿಪೇಟೆ ಠಾಣೆಯ ಇಬ್ಬರು ಎಎಸ್​ಐಗಳು, ಒಬ್ಬ ಹವಾಲ್ದಾರ್ ಹಾಗೂ ಇಬ್ಬರು ಪೇದೆಗಳು ಪಾಲ್ಗೊಂಡಿದ್ದರು. ಆತನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರಿಂದ ಅವರ ಕಫದ ಮಾದರಿ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆರೋಗ್ಯ ಇಲಾಖೆ ಸೂಚನೆ ಮೇರೆಗೆ ಅವರು ಹೋಟೆಲ್ ಕೋಣೆಗಳಲ್ಲಿ ಪ್ರತ್ಯೇಕವಾಗಿದ್ದಾರೆ.
ಸೂಕ್ತ ವಾಹನ ವ್ಯವಸ್ಥೆಯಿಲ್ಲದೇ ಮಗು ಸಾವು: ಆಂಬುಲೆನ್ಸ್​ ನೀಡಲು ನಿರಾಕರಣೆ, ಕಣ್ಣೀರಿಡುತ್ತಾ ಮೃತದೇಹ ಹೊತ್ತು ನಡೆದ ತಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 11 =
Remember me
