ವಿಜಯಪುರ:ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನವೇ ಬಿಜೆಪಿ ಟಿಕೆಟ್​ಗಾಗಿ ಆಕಾಂಕ್ಷಿಗಳ ಮಧ್ಯೆ ಭಾರಿ ಪೈಪೋಟಿ ಉಂಟಾಗಿದ್ದು, ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಗದ್ದಲ-ಗಲಾಟೆ ಶುರುವಾಗಿದೆ‌. ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಆಕಾಂಕ್ಷಿಗಳ ಬೆಂಬಲಿಗರು ಪಕ್ಷದ ರಾಜ್ಯಾಧ್ಯಕ್ಷ ರ ಸಮ್ಮುಖದಲ್ಲೇ ಪರಸ್ಪರ ಮಾತಿನ ಚಕಮಕಿ ನಡೆಸಿದರು.
ಮಂಗಳವಾರ ಬಸವನವಾಗೇವಾಡಿಯ ತಾಳಿಕೋಟೆ ರಸ್ತೆಯಲ್ಲಿರುವ ಸಭಾಭವನದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹಾಗೂ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆದಿದ್ದರಿಂದ ಕೆಲಕಾಲ ಗೊಂದಲ ಉಂಟಾಯಿತಲ್ಲದೆ ಕಾರ್ಯಕ್ರಮಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿತು.
ಘಟನೆಗೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ಭಾಷಣವೇ ಕಾರಣ. ಎಸ್.ಕೆ.ಬೆಳ್ಳುಬ್ಬಿ ಅವರು ಭಾಷಣ ಮಧ್ಯೆ, ಬರುವ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ನೀಡಬೇಕು. ನಿನ್ನೆ ಮೊನ್ನೆ ಬಂದವರಿಗೆ ಟಿಕೆಟ್ ನೀಡಬಾರದು ಎಂದಿದ್ದರಿಂದ ಅಪ್ಪುಗೌಡ ಪಾಟೀಲ ಮನಗೂಳಿ ಬೆಂಬಲಿಗರು ಗಲಾಟೆ ಆರಂಭಿಸಿದರು.
ಮಧ್ಯ ಪ್ರವೇಶಿಸಿದ ಬಿಜೆಪಿ ರಾಜ್ಯಾಧ್ಯಕ್ಷರು, ಬೆಂಬಲಿಗರನ್ನು ಕರೆತಂದು ಗಲಾಟೆ ಮಾಡಿಸುವುದು ಸರಿಯಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಬೇಕೆಂದು ನಿರ್ಧರಿಸುತ್ತದೆ. ಗಲಾಟೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು. ಬಳಿಕ ಕಾರ್ಯಕರ್ತರು ಸುಮ್ಮನಾದರು.
ಮತ್ತೆ ಆಯತಪ್ಪಿ ಎಡವಿದ ಮಾಜಿ ಸಿಎಂ; ಈ ಊರಲ್ಲಿ ಸಿದ್ದರಾಮಯ್ಯಗೆ ಇದೇನಿದು ಸಮಸ್ಯೆ?!

ಉದ್ಯೋಗಕ್ಕಾಗಿ ಛಲ ಬಿಡದ ಯತ್ನ: 2 ತಿಂಗಳಲ್ಲಿ 600 ಇ-ಮೇಲ್​, 80 ಫೋನ್​ ಕರೆ; ಕೊನೆಗೂ ಸಿಕ್ತು ಕೆಲಸ

ಇದು ವಿದೇಶದಲ್ಲಿನ ಪ್ರಪ್ರಥಮ ಸ್ವಂತ ಕನ್ನಡ ಭವನ; 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 17 =
Remember me
