ರಾಮನಗರ:ಎರಡು ಪಕ್ಷಗಳ ಕಾರ್ಯಕರ್ತರ ಮಧ್ಯೆ ಗಲಾಟೆಯಾಗಿ ಮಾಜಿ ಶಾಸಕರೊಬ್ಬರ ಕಾರಿನ ಮೇಲೆ ಕಲ್ಲು ತೂರಾಟವಾದ ಪ್ರಸಂಗವೂ ನಡೆದಿದೆ. ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಈ ಗಲಾಟೆ ನಡೆದಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಜಿ ಶಾಸಕ ಎಚ್​.ಸಿ.ಬಾಲಕೃಷ್ಣ ಅವರು ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಗೆ ಬಂದಾಗ ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು.
ಹೀಗೆ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ‌ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಜೆಡಿಎಸ್ ಕಾರ್ಯಕರ್ತರ ವಿರೋಧದ ನಡುವೆ ಕಾಂಗ್ರೆಸ್​ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು.
ಶಾಸಕ ಮಂಜುನಾಥ ಹೆಸರು ಕೊನೆಯಲ್ಲಿ ಹಾಕಿದ್ದಾರೆ, ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಜೆಡಿಎಸ್​ ಕಾರ್ಯಕರ್ತರು ಮಾಜಿ ಶಾಸಕ ಬಾಲಕೃಷ್ಣ ಕಾರ್ಯಕ್ರಮ ಮುಗಿಸಿ ಹೋಗುವಾಗ ಕಾರಿನ ಮೇಲೆ ಕಲ್ಲೆಸೆದಿದ್ದರು. ಪರಿಣಾಮವಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ‌ಕೂದುರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪತಿಯ ಅಂತ್ಯಕ್ರಿಯೆ ಸಂದರ್ಭ ಪತ್ನಿಗೆ ಹೃದಯಾಘಾತ; ಒಂದೇ ದಿನ ದಂಪತಿಯ ಸಾವು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
